ಕುಮಟಾ: ಕಾಲೇಜು ಶಿಕ್ಷಣ ಹಂತದಲ್ಲಿ ಸಂಶೋಧನೆಗೆ ಒತ್ತು ನೀಡಲು ಕನಿಷ್ಠ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಆರಂಭವಾದ ಪದವಿ ಶಿಕ್ಷಣ ಹಂತದಲ್ಲಿ ಸಂಶೋಧನೆಗೆ ಒತ್ತು ನೀಡುವ ‘ಗ್ರೇಸ್-2023’ ಎರಡು ದಿನದ ಅಂತರರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕುಮಟಾ ಸರ್ಕಾರಿ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ವಿದ್ಯಾರ್ಥಿಗಳ ಶ್ರೇಯಕ್ಕಾಗಿ ಸಮ್ಮೇಳನ ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಕಲಬುರಗಿ ವಿ.ವಿ ಮಾಜಿ ಉಪಕುಲಪತಿ ಡಾ.ಬಿ.ಜಿ. ಮೂಲಿಮನಿ, ದೇಶವನ್ನು ಸುಸ್ಥಿರ ಅಭಿವೃದ್ಧಿಯತ್ತ ಮುನ್ನಡೆಸುವ ಸಂಶೋಧನೆಗೆ ಒತ್ತು ನೀಡಬೇಕಾಗಿದೆ. ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಶಾಲಾ ಮಟ್ಟದಲ್ಲಿ ಪ್ರೋತ್ಸಾಹಿಸುವಂತಾಗಬೇಕು ಎಂದರು.

ಉನ್ನತ ಶಿಕ್ಷಣ ಇಲಾಖೆ ಆಂತರಿಕ ಗುಣಮಟ್ಟ ಭರವಸಾ ಕೋಶದ ರಾಜ್ಯ ನೋಡಲ್ ಅಧಿಕಾರಿ ಡಾ.ಕೆ. ವಿಕ್ರಮ್ ಮಾತನಾಡಿ, ಸೌಲಭ್ಯಗಳಿಗಿಂತ ವಿದ್ಯಾರ್ಥಿಗಳ ಹುಮ್ಮಸ್ಸು, ಆಸಕ್ತಿ ಸಂಶೋಧನೆಗೆ ಒತ್ತು ನೀಡಬಲ್ಲದು. ಕುಮಟಾ ಕಾಲೇಜಿನಲ್ಲಿ ನಡೆದ ಸಂಶೋಧನೆಗೆ ಒತ್ತು ನೀಡುವ ಅಂತರರಾಷ್ಟ್ರೀಯ ಸಮ್ಮೇಳನಗಳು ಉನ್ನತ ಶಿಕ್ಷಣ ಇಲಾಖೆ, ವಿಶ್ವವಿದ್ಯಾಲಯಗಳ ಗಮನ ಸೆಳೆಯಬೇಕಾಗಿದೆ ಎಂದರು.

ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ನ್ಯಾಕ್ ವಿಭಾಗದ ಅಧಿಕಾರಿ ಆಫ್ತಾಬ್ ಭಾಹಿ ಮಾತನಾಡಿದರು. ಸಮ್ಮೇಳನ ಸಂಚಾಲಕ ಐ.ಕೆ. ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯೆ ವಿಜಯಾ ನಾಯ್ಕ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.