ಕಾರವಾರ: ‘ಚುನಾವಣೆ ಸಮಯದಲ್ಲಿ ಪರೇಶ್ ಮೇಸ್ತ ಪ್ರಕರಣದಲ್ಲಿ ದಾಖಲಾದ ಪ್ರಕರಣಗಳ ವಿಷಯ ಪ್ರಸ್ತಾಪಿಸಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರೇಶ್ ಮೇಸ್ತ ಸಾವಿನ ನಂತರದ ದಿನಗಳಲ್ಲಿ ಅಸ್ತಿತ್ವಕ್ಕೆ ಬಂದ ಸರ್ಕಾರದಲ್ಲಿ ಕಾಗೇರಿ ಅವರು ಅಧಿಕಾರದಲ್ಲಿದ್ದರು. ಆಗ ಏಕೆ ಹಿಂದೂ ಯುವಕರ ಮೇಲಿನ ಪ್ರಕರಣ ಹಿಂಪಡೆಯಲಿಲ್ಲ ಎಂಬುದನ್ನು ತಿಳಿಸಬೇಕು. ಕಾಗೇರಿಯಂತಹ ಅನುಭವಿ ರಾಜಕಾರಣಿ ಮತ ಪಡೆಯಲು ಇಂತಹ ಕ್ಷುಲ್ಲಕ ಹೇಳಿಕೆ ಕೊಡಬಾರದು’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಭೇಟಿ ನೀಡಿದ್ದಾಗ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲಿಲ್ಲ. ಇಲ್ಲಿನ ಅರಣ್ಯ ಭೂಮಿ ಸಮಸ್ಯೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಜನರು ಎದುರಿಸುವ ತೊಂದರೆಗಳಿಗೆ ಪರಿಹಾರ ನೀಡುವ ಸಂಬಂಧ ಸ್ಪಷ್ಟ ಭರವಸೆಯನ್ನೂ ನೀಡಲಿಲ್ಲ. ಜಿಲ್ಲೆಯ ಕುಣಬಿ, ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಪ್ರಯತ್ನಿಸುತ್ತಿದ್ದರೂ ಹತ್ತು ವರ್ಷದಿಂದ ಕೇಂದ್ರ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ’ ಎಂದು ದೂರಿದರು.

‘ಹಾಲಕ್ಕಿ, ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಷಯವೂ ಸೇರಿದಂತೆ ಜಿಲ್ಲೆಯ ಜನರ ಸಮಸ್ಯೆಗಳ ಕುರಿತು ಆರು ಬಾರಿ ಸಂಸದರಾದರೂ ಅನಂತಕುಮಾರ ಹೆಗಡೆ ಒಂದು ಮಾತನ್ನೂ ಆಡಲಿಲ್ಲ’ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಪ್ರತಿನಿಧಿ ಕೆ.ಶಂಭು ಶೆಟ್ಟಿ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.