ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿದ್ದ ಮಾಹಿತಿ ಇದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.

'ಶಿರೂರಿನ ಒಂದೇ ಕುಟುಂಬದ ನಾಲ್ಕು ಮತ್ತು ಅದೇ ಕುಟುಂಬದ ಸಂಬಂಧಿ ಜಗನ್ನಾಥ, ಉಳುವರೆ ಗ್ರಾಮದ ಸಣ್ಣಿ ಗೌಡ, ಮೂರು ಟ್ಯಾಂಕರ್ ಹಾಗೂ ಒಂದು ಲಾರಿಯ ಚಾಲಕ ಕಣ್ಮರೆಯಾಗಿರುವುದಾಗಿ ಅವರ ಕುಟುಂಬಗಳು ಮಾಹಿತಿ ನೀಡಿವೆ. ಈ ಪೈಕಿ ಶಿರೂರಿನ ನಾಲ್ವರು, ತಮಿಳುನಾಡಿನ ನಾಮಕ್ಕಲ್'ನ ಚಿಣ್ಣನನ್ ಎಂಬ ಟ್ಯಾಂಕರ್ ಚಾಲಕನ ಮೃತದೇಹ ಪತ್ತೆಯಾಗಿದೆ. ಇನ್ನೊಂದು ಮೃತದೇಹದ ಗುರುತು ಪತ್ತೆ ಕಾರ್ಯ ನಡದಿದೆ' ಎಂದು ಗುರುವಾರ ಮಾಧ್ಯಮಗಳಿಗೆ ತಿಳಿಸಿದರು.

'ಮಂಗಳೂರಿನಿಂದ ಹುಬ್ಬಳ್ಳಿಗೆ ಅಡುಗೆ ಅನಿಲ ಪೂರೈಸಲು ಸಾಗುತ್ತಿದ್ದ ಟ್ಯಾಂಕರ್ ನದಿಯಲ್ಲಿ ಬಿದ್ದಿದೆ. ಜೊಯಿಡಾದ ರಾಮನಗರದಿಂದ ಕೇರಳಕ್ಕೆ ನಾಟಾ ಸಾಗಿಸುತ್ತಿದ್ದ ಲಾರಿಯ ಜಿಪಿಎಸ್ ಲೊಕೇಶನ್ ಮಣ್ಣಿನ ರಾಶಿಯ ಬಳಿ ಪತ್ತೆಯಾಗಿದೆ. ಈ ಲಾರಿ ಮಣ್ಣಿನಡಿ ಹುದುಗಿರುವ ಶಂಕೆ ಇದೆ' ಎಂದೂ ತಿಳಿಸಿದರು.

'ಸಗಡಗೇರಿ ಬಳಿ ಗಂಗಾವಳಿ ನದಿಯಲ್ಲಿ ಬಿದ್ದಿರುವ ಗ್ಯಾಸ್ ಟ್ಯಾಂಕರ್ ನಿಂದ ತುಂಬಿರುವ ಅನಿಲವನ್ನು ಖಾಲಿ ಮಾಡಲು ಎಚ್.ಪಿ.ಸಿ.ಎಲ್ ಕಂಪನಿಯ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಲಿನ ಗ್ರಾಮಗಳ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಆ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗಿದೆ' ಎಂದರು.
.ಶಿರೂರು ದುರಂತ: ಇಬ್ಬರ ಮೃತದೇಹ ಪತ್ತೆ, ಮೃತರ ಸಂಖ್ಯೆ 6ಕ್ಕೆ ಏರಿಕೆ.ಗುಡ್ಡ ಕುಸಿತದ ಅವಘಡ: ಶಿರೂರು, ಉಳುವರೆ ಗ್ರಾಮದಲ್ಲಿ ಜನರ ಆಕ್ರಂದನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.