ಶಿರಸಿ: ಇಲ್ಲಿನ ಕೆಡಿಸಿಸಿ ಬ್ಯಾಂಕಿಗೆ ಆಡಳಿತಾಧಿಕಾರಿ ನೇಮಕ ಸಂಬಂಧಿಸಿ, ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಾಗಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಮತ್ತೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕೆಡಿಸಿಸಿ ಬ್ಯಾಂಕ್ ನಿರ್ದೇಶಕರ ಅಧಿಕಾರಾವಧಿ ಪೂರ್ಣಗೊಂಡಿದ್ದರಿಂದ ಜುಲೈ 15ರಿಂದ ಇದಕ್ಕೆ ಆಡಳಿತಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರನ್ನು ನೇಮಿಸಲಾಗಿತ್ತು. ಕೋವಿಡ್ 19 ಇರುವ ಕಾರಣಕ್ಕೆ ಬ್ಯಾಂಕ್ ಚುನಾವಣೆಯನ್ನು ಡಿಸೆಂಬರ್ವರೆಗೆ ಮುಂದೂಡಿ ಸರ್ಕಾರ ಆದೇಶ ಹೊರಡಿಸಿತ್ತು.

ಚುನಾವಣೆ ನಡೆಯುವ ತನಕ ಹಿಂದಿನ ಆಡಳಿತ ಮಂಡಳಿಯನ್ನೇ ಮುಂದುವರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್, ಆಡಳಿತಾಧಿಕಾರಿ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಾಗಿ, ಹಿಂದಿನ ಅಧ್ಯಕ್ಷರಾಗಿದ್ದ ಎಸ್.ಎಲ್.ಘೋಟ್ನೇಕರ್ ಬುಧವಾರ ಮತ್ತೆ ಅಧಿಕಾರ ವಹಿಸಿಕೊಂಡರು. ಆಡಳಿತಾಧಿಕಾರಿಯನ್ನು ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.