ಶಿರಸಿ: ಇಲ್ಲಿನ ಮಾರಿಕಾಂಬಾ ದೇವಾಲಯಕ್ಕೆ ಲೋಕಸಭಾ ಚುನಾವಣೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಪತಿ ಶಿವರಾಜಕುಮಾರ ಅವರೊಂದಿಗೆ ಮಂಗಳವಾರ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವರಾಜಕುಮಾರ ಅವರು, ಪ್ರತಿ ವರ್ಷ ಶಿರಸಿಗೆ ಬಂದಾಗಲೆಲ್ಲಾ ದೇವಿಯ ಆಶೀರ್ವಾದ ಪಡೆಯುತ್ತೇವೆ. ರಾಜ್ಯದಲ್ಲಿ ಮುಂಜಾನೆಯಿಂದ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ, ಇಲ್ಲಿ ಬಿಸಿಲಿನ ತಾಪಮಾನ ಕೂಡ ಹೆಚ್ಚಿದೆ. ಆದ್ದರಿಂದ ಮಧ್ಯಾಹ್ನದೊಳಗೆ ಕಡ್ಡಾಯವಾಗಿ ಮತದಾನ ಮಾಡಿ ಎಂದು ಸಂದೇಶ ನೀಡಿದರು.

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಕುರಿತ ಮಾತನಾಡಿದ ಅವರು, ಕ್ಷೇತ್ರದಲ್ಲಿ ಗೆಲ್ಲುವುದಕ್ಕಾಗಿಯೇ ಚುನಾವಣೆಗೆ ಸ್ಪರ್ಧಿಸಿರುವುದು. ಮತದಾರರು ಗೀತಾಳ ಕೈ ಹಿಡಿಯಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ತಾಯಿಯ ದರ್ಶನ ಪಡೆದಿರುವುದು ಸಂತಸ ತಂದಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಗೆಲ್ಲುವ ಎಲ್ಲಾ ರೀತಿಯ ಸಕಾರಾತ್ಮಕ ವಾತಾವರಣ ಕಾಣುತ್ತಿದೆ. ಮುಂದಿನದು ದೇವರು ಹಾಗೂ ಜನರ ಅಭಿಪ್ರಾಯಕ್ಕೆ ಬಿಡಲಾಗಿದೆ ಎಂದರು.

ಶಿರಸಿಯ ಶಾಸಕ ಭೀಮಣ್ಣ ನಾಯ್ಕ, ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಗದೀಶ್ ಗೌಡ, ಅಬ್ಬಾಸ್ ತೋನ್ಸೆ ಸೇರಿ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.