ಶಿರಸಿ: ‘ಬಿಜೆಪಿ ಬಕಾಸುರ ಇದ್ದಂತೆ. ಚನ್ನಪಟ್ಟಣ ಸೇರಿ ಇತರೆ ಉಪಚುನಾವಣೆಯಲ್ಲಿ ಜೆಡಿಎಸ್ ನಾಯಕರನ್ನು ಬಿಜೆಪಿಯವರು ನುಂಗಿ ಜೀರ್ಣಿಸಿಕೊಳ್ಳುತ್ತಾರೆ’ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

‘ಹೊಂದಾಣಿಕೆ ರಾಜಕಾರಣ ಮಾಡಿಕೊಂಡರೂ ಜೆಡಿಎಸ್ನ ಚಿಕ್ಕಪುಟ್ಟ ನಾಯಕರನ್ನು ಈ ಉಪಚುನಾವಣೆಯಲ್ಲಿ ಬಿಜೆಪಿಯವರು ಇನ್ನಿಲ್ಲದಂತೆ ಮಾಡುವರು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಕ್ಕಳನ್ನು ಅಸಾಂವಿಧಾನಿಕ ಪದಗಳಿಂದ ಟೀಕಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಮಗ ನಿಖಿಲ್ಗಾಗಿ ಚನ್ನಪಟ್ಟಣ ಟಿಕೆಟ್ ಪಡೆಯಲು ಯಡಿಯೂರಪ್ಪ ಅವರ ಕಾಲಿಗೆ ಬಿದ್ದಿದ್ದಾರೆ. ಈಗ ಅವರಿಗೆ ತತ್ವ, ಸಿದ್ದಾಂತಗಳು ಕಾಣುತ್ತಿಲ್ಲವೇ’ ಎಂದು ಅವರು ಪ್ರಶ್ನಿಸಿದರು.

‘ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಇಳಿಸಲು ಅವರ ಪಕ್ಷದವರೇ ಪ್ರಯತ್ನಿಸುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.