ಮುಂಡಗೋಡ: ಇಲ್ಲಿನ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ (ಟಿ.ಎ.ಪಿ.ಸಿ.ಎಂ.ಎಸ್/ಮಾರ್ಕೆಟಿಂಗ್ ಸೊಸೈಟಿ) ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಜೂನ್ 27ರಂದು ಚುನಾವಣೆ ನಡೆಯಲಿದೆ.

ಕಳೆದ ಅವಧಿಯಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಬಿಜೆಪಿ ಮುಖಂಡ ರವೀಂದ್ರಗೌಡ ಪಾಟೀಲ ಅವರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿದ್ದರಿಂದ, ಎರಡು ವರ್ಷಗಳ ಕಾಲ ಅವರು ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷರಾಗಿ ಅಧಿಕಾರ ನಡೆಸಿದ್ದರು. ಆದರೆ, ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರು, ಸರ್ಕಾರದ ನಾಮನಿರ್ದೇಶನ ನೇಮಕವನ್ನು ಧಾರವಾಡ ಹೈಕೋರ್ಟ್ ಪೀಠದಲ್ಲಿ ಪ್ರಶ್ನಿಸಿದ್ದರು. ಆಗ, ಸರ್ಕಾರದ ನೇಮಕವನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ಹೀಗಾಗಿ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ತೆರವುಗೊಂಡಿದೆ.

ಒಟ್ಟು 14 ನಿರ್ದೇಶಕರಿದ್ದು, ಇಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು ಬಹುಮತವನ್ನು ಹೊಂದಿದ್ದಾರೆ. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಲ್ಲಿಯೇ ಎರಡು ಗುಂಪುಗಳಾಗಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಎರಡೂ ಗುಂಪುಗಳಿಂದ ತೆರೆಮರೆಯ ಕಸರತ್ತು ಜೋರಾಗಿ ನಡೆದಿದೆ. ಅತ್ತ ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ಣಾಯಕರಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ.

ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಮಾಜಿ ಶಾಸಕ ವಿ.ಎಸ್. ಪಾಟೀಲ ಇಬ್ಬರಿಗೂ ಇದು ಪ್ರತಿಷ್ಠೆಯಾಗಿದ್ದು, ತಮ್ಮ ಬೆಂಬಲಿಗರಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಇನ್ನಿಲ್ಲದ ರಾಜಕೀಯ ತಂತ್ರಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.