ಭಟ್ಕಳ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಅಂಗವಾಗಿ ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ಸೋಮವಾರ ಭಟ್ಕಳದ ಹನುಮಂತನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮೊದಲಿಗೆ ಶಿರಾಲಿಯ ಸಾರದಹೊಳೆಯ ಹಳೆಕೋಟೆ ಹನುಮಂತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಂಸದರು, ಅಲ್ಲಿಂದ ಭಟ್ಕಳಕ್ಕೆ ಆಗಮಿಸಿ ಪಟ್ಟಣದ ಸಂಶುದ್ದೀನ್ ಸರ್ಕಲ್‌ನಲ್ಲಿ ಹಾಕಲಾಗಿರುವ ರಾಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ನಂತರ ಚನ್ನಪಟ್ಟಣ ಹನುಮಂತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಲಕ್ಷದೀಪೋತ್ಸವ ನಡೆಯುತ್ತಿರುವ ಚೌಥನಿಯ ಕುದ್ರೆಬೀರಪ್ಪ ಮುಖ್ಯಪ್ರಾಣ ದೇವಸ್ಥಾನಕ್ಕೆ ತೆರಳಿ ಮುಖ್ಯಪ್ರಾಣ ಹಾಗೂ ಕುದ್ರೆಬೀರಪ್ಪ ದೇವರಿಗೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ‘500 ವರ್ಷದ ನಿರಂತರ ಹೋರಾಟದ ಫಲ ಇಂದು ಈ ದೇಶದ ಜನರಿಗೆ ಸಿಕ್ಕಿದೆ. ಅಯೋಧ್ಯೆ ಕೇವಲ ಒಬ್ಬ ವ್ಯಕ್ತಿಯಿಂದ ನಿರ್ಮಾಣವಾಗಿಲ್ಲ. ದೇಶದ ಪ್ರತಿ ಹಿಂದೂವಿನ ಕೊಡುಗೆ ಈ ಮಂದಿರಕ್ಕಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.