ಶಿರಸಿ: ‘ಭಯೋತ್ಪಾದನೆ ನಿಗ್ರಹದ ಸಂಬಂಧ ಕೇಂದ್ರ ಸರ್ಕಾರ ಮಸೂದೆ ಮಂಡಿಸುವಾಗ ಚರ್ಚೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಸಹಪಕ್ಷಗಳು ಭಾಗವಹಿಸದಿರುವುದು ಅವು ಭಯೋತ್ಪಾದಕರ ಪರವಾದ ನಿಲುವು ಹೊಂದಿವೆ ಎಂಬುದನ್ನು ಸ್ಪಷ್ಟಪಡಿಸಿದೆ’ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಟೀಕಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದೇಶದ ಆಂತರಿಕ ಭದ್ರತೆ, ಕೋವಿಡ್ ನಿಯಂತ್ರಣದಂತಹ ಮಹತ್ವದ ಚರ್ಚೆ ನಡೆಯುತ್ತಿದ್ದಾಗ ಪಾಲ್ಗೊಳ್ಳದೆ ವಿರೋಧ ಪಕ್ಷಗಳು ತಮ್ಮ ಪಲಾಯನವಾದ ಬಹಿರಂಗಗೊಳಿಸಿಕೊಂಡಿವೆ’ ಎಂದು ಆರೋಪಿಸಿದ್ದಾರೆ.

‘ದೇಶದ ಹಿತಕಾಯುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದ್ದಾಗ ಅದನ್ನು ಧಿಕ್ಕರಿಸಿ ನಡೆದ ಕಾಂಗ್ರೆಸ್ ನಾಯಕರು ತಮ್ಮ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.