ಕಡಲುಕೊರೆತ ಸಮಸ್ಯೆ ನಿಯಂತ್ರಣಕ್ಕೆ ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಡಲು ಕೊರೆತದ ಸಮಸ್ಯೆ ಉಂಟಾದಲ್ಲಿ ತಕ್ಷಣ ಅನುದಾನ ನೀಡಿ ತುರ್ತು ಕ್ರಮ ಕೈಗೊಳ್ಳಲಾಗುತ್ತದೆ.
ಮಂಕಾಳ ವೈದ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ
ಈ ಬಾರಿ ಕಡಲು ಕೊರೆತ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳುವ ಸಂಬಂಧ ಇಲಾಖೆಯಿಂದ ₹ 5 ಕೋಟಿ ಪ್ರಸ್ತಾವ ಸಲ್ಲಿಕೆಯಾಗಿದೆ. ತುರ್ತು ಕಾಮಗಾರಿ ಕೈಗೊಳ್ಳಲು ಕೆಟಿಟಿಪಿ ಕಾಯ್ದೆಯಿಂದ ವಿನಾಯಿತಿ ನೀಡಲು ಕೋರಲಾಗಿದೆ.
ಟಿ.ಎಸ್. ರಾಠೋಡ್ ಬಂದರು ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್
ಸಮುದ್ರ ಕೊರೆತದ ಹಾನಿ ನಿಯಂತ್ರಣಕ್ಕೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಕುರಿತು ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದೇವೆ.
ಹರಿಶ್ಚಂದರ ನಾಯ್ಕ, ಕರ್ಕಿ ಗ್ರಾಮ ಪಂಚಾಯಿತಿ ಸದಸ್ಯ
ಕಡಲ ತೀರದಲ್ಲಿ ವಾಸಿಸುವ ಮೀನುಗಾರರು ಪ್ರತಿ ವರ್ಷ ಕಡಲ್ಕೊರೆತದಿಂದ ನಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ಬಾರಿ ಹಾನಿ ಉಂಟಾಗದಂತೆ ಶಾಶ್ವತ ಪರಿಹಾರ ಕಲ್ಪಿಸುವ ಅಗತ್ಯವಿದೆ.
ವೆಂಕಟ್ರಮಣ ಮೊಗೇರ, ಮುಂಡಳ್ಳಿ ಗ್ರಾಮಸ್ಥ
ಹೊನ್ನಾವರ ತಾಲ್ಲೂಕಿನ ಕರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಪ್ಪಲಕೇರಿ ಸಮೀಪ ಕಡಲ ಕೊರೆತದಿಂದ ಹಾನಿ ಉಂಟಾಗಿರುವುದು.
ಗೋಕರ್ಣದ ಮುಖ್ಯ ಕಡಲತೀರದ ರುದ್ರಪಾದದ ಬಳಿ ಕಡಲು ಕೊರೆತದ ಹಾನಿ ತಡೆಗೆ ಅಲೆ ತಡೆಗೋಡೆ ನಿರ್ಮಿಸಿರುವುದು.