ಅಂಕೋಲಾ: ರೈಲಿನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಅಂಕೋಲಾ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕೇರಳದ ಕಣ್ಣೂರು ಮೂಲದ ಸದ್ಯ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನೆಲೆಸಿದ್ದ ಸುಬರಾವ್ ದತ್ತಾತ್ರೇಯ ಚವ್ಹಾಣ್ (47) ಬಂಧಿತ ಆರೋಪಿ.

'ಆರೋಪಿಯು ಮಂಗಳವಾರ ಪೂನಾ ಎಕ್ಸಪ್ರೆಸ್ (ರೈಲು ಸಂಖ್ಯೆ 11098) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದಕ್ಷಿಣ ಭಾರತದ ರಾಜ್ಯವೊಂದರ ಯುವತಿಗೆ ಕಿರುಕುಳ ನೀಡಿದ್ದ. ರೈಲು ಮಾದನಗೇರಿ ರೈಲು ನಿಲ್ದಾಣ ದಾಟುತ್ತಿದ್ದಂತೆ ಆತ ಲೈಂಗಿಕ ಕಿರುಕುಳ ನೀಡಿದ್ದಾಗಿ ಯುವತಿ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.