ಶಿರಸಿ: ‘ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಯಾಗಬೇಕು ಎಂಬ ಬೇಡಿಕೆಗೆ ಧನಾತ್ಮಕ ಸ್ಪಂದನೆ ವ್ಯಾಪಕವಾಗುತ್ತಿದ್ದು, ಹೋರಾಟದ ಕುರಿತು ಘಟ್ಟದ ಮೇಲಿನ ಎಲ್ಲ ತಾಲ್ಲೂಕುಗಳ ಜನರನ್ನು ಸಂಪರ್ಕಿಸಲು ತೀರ್ಮಾನಿಸಲಾಗಿದೆ’ ಎಂದು ರಿಸೋರ್ಸ್ ಫಾರ್ ಕ್ರಿಯೆಟಿವ್ ಡೆಮಾಕ್ರಸಿ ಸಂಸ್ಥೆಯ ಕೃಷ್ಣಮೂರ್ತಿ ಪನ್ನೆ ತಿಳಿಸಿದರು.

ನಗರದದಲ್ಲಿ ಈಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನಾತಕೋತ್ತರ ಕೇಂದ್ರ, ವಿಶ್ವವಿದ್ಯಾಲಯ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾ ಕೇಂದ್ರಕ್ಕೆ ಸೀಮಿತವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಶಿರಸಿ ಪ್ರತ್ಯೇಕ ಜಿಲ್ಲೆಯಾದರೆ ಇಲ್ಲಿ ಅನುಷ್ಠಾನಗೊಳ್ಳುತ್ತವೆ. ಶಿರಸಿ ಜಿಲ್ಲಾ ಕೇಂದ್ರಕ್ಕೆ ಶಿರಸಿ, ಯಲ್ಲಾಪುರ, ಮುಂಡಗೋಡ ತೀರಾ ಸಮೀಪದಲ್ಲಿದ್ದು, ಅಲ್ಲಿನ ಎಲ್ಲ ಜನರಿಗೂ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ ರೈಲ್ವೆ ಯೋಜನೆಯೂ ಅನುಷ್ಠಾನಗೊಳ್ಳಲು ಅವಕಾಶ ಹೆಚ್ಚಿರುತ್ತದೆ’ ಎಂದರು.

‘ಶಿರಸಿ ಹೊಸ ಜಿಲ್ಲೆ ರಚನೆಯ ಅವಶ್ಯಕತೆ ಮತ್ತು ಅನಿವಾರ್ಯತೆಯ ಬಗ್ಗೆ ವಿದ್ಯಾವಂತರು, ಎಲ್ಲ ಸಂಘ-ಸಂಸ್ಥೆಗಳು, ಪ್ರತಿನಿಧಿಗಳು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಅಭಿಪ್ರಾಯವನ್ನು ವ್ಯಾಪಕವಾಗಿ ಮಾಧ್ಯಮಗಳ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಬೆಂಬಲ ವ್ಯಕ್ತಪಡಿಸಿ, ಜನಾಭಿಪ್ರಾಯ ಕ್ರೋಢಿಕರಣಕ್ಕೆ ಸಹಕರಿಸಬೇಕು’ ಎಂದರು.

ಶಿರಸಿ ವಕೀಲರ ಸಂಘದ ಅಧ್ಯಕ್ಷ ಸಿ.ಎಫ್.ಈರೇಶ, ಪ್ರಮುಖರಾದ ಆರ್.ಜಿ.ಭಟ್, ಎಂ.ಎಸ್.ಹೆಗಡೆ, ಸುಭಾಸ್ ಕಾನಡೆ, ಬಿ.ಕೆ.ಕೆಂಪರಾಜು, ರಮಾನಂದ ನಾಯ್ಕ, ಜಿ.ವಿ.ಹೆಗಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.