ಶಿರಸಿ: ‘ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿರಂಗನ್ ವರದಿಯನ್ನು ನಾವು ವಾಪಸ್ ಕಳುಹಿಸುತ್ತೇವೆ. ವರದಿ ತಿರಸ್ಕರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚಿಸುವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ವತಿಯಿಂದ ನಗರದಲ್ಲಿ ಶನಿವಾರ ನಡೆದ ಕಸ್ತೂರಿ ರಂಗನ್ ವರದಿ ವಿರೋಧಿ ಜಾಥಾ ಸಮಾರೋಪದಲ್ಲಿ ಮಾತನಾಡಿದ ಅವರು, ‘ಅರಣ್ಯ ಉಳಿಯಬೇಕು, ಜನರಿಗೆ ಸಮಸ್ಯೆ ಆಗಬಾರದು. ಈ ದಿಸೆಯಲ್ಲಿ ಕ್ರಮವಹಿಸುವಂತೆ ಕೋರಲಾಗುವುದು‘ ಎಂದರು.

‘ಅರಣ್ಯ ಉಳಿಯುವಲ್ಲಿ ಅರಣ್ಯ ಇಲಾಖೆ ಪಾತ್ರ ಇದ್ದಷ್ಟೇ ಅರಣ್ಯ ವಾಸಿಗಳ ಪಾತ್ರವೂ ಇದೆ. ಈ ನಿಟ್ಟಿನಲ್ಲಿ ಅರಣ್ಯ ವಾಸಿಗಳ ಮೇಲೆ ದೌರ್ಜನ್ಯ ನಡೆಸದಂತೆ ಸೂಚಿಸಲು ಮುಖ್ಯಮಂತ್ರಿ ಬಳಿ ಮಾತನಾಡುವೆ’ ಎಂದರು.

ವಿಧಾನಸಭೆಯ ಮಾಜಿ ಅಧ್ಯಕ್ಷ ಕಾಗೋಡು ತಿಮ್ಮಪ್ಪ, ಹೋರಾಟ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ, ಶಾಸಕರಾದ ಭೀಮಣ್ಣ ನಾಯ್ಕ, ಸತೀಶ ಸೈಲ್ ಇದ್ದರು. 8 ಸಾವಿರಕ್ಕೂ ಹೆಚ್ಚು ಅರಣ್ಯ ವಾಸಿಗಳು ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.