ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗಾಂಜಾ ಸೇವನೆ ಮಾಡಿ ಅಡ್ಡಾದಿಡ್ಡಿ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಮಹಿಳಾ ಟೆಕಿಗಳು, ತಮ್ಮನ್ನು ಪ್ರಶ್ನಿಸಿದ ಮೂವರು ಮಹಿಳಾ ಪೊಲೀಸರ ಮೇಲೆ ಶನಿವಾರ ರಾತ್ರಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಬಿಹಾರ ಮೂಲದ ಪಲ್ಲವಿ ಪ್ರಿಯಾ ಸುನಿಲಕುಮಾರ್ ( 29) ಮತ್ತು ಜಾರ್ಖಂಡ್ನ ಪ್ರಿಯಾರಾಯ್ ಧರ್ಮೇಂದ್ರಕುಮಾರ್ (26) ಹಲ್ಲೆ ನಡೆಸಿದ ಪ್ರವಾಸಿಗರು. ಇಬ್ಬರೂ ಬೆಂಗಳೂರಿನಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು ಗೆಳೆಯರೊಂದಿಗೆ ಗೋಕರ್ಣಕ್ಕೆ ಬಂದಿದ್ದರು.

ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಪಾದಚಾರಿಗಳಿಗೆ ಭಯಪಡಿಸುತ್ತಿದ್ದನ್ನು ಕಂಡು ಮಹಿಳಾ ಪೊಲೀಸ್ ಸಿಬ್ಬಂದಿ ಅವರನ್ನು ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಟೆಕಿಗಳು ಮೊದಲು ಆ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಸಹಾಯಕ್ಕೆ ಬಂದ ಮತ್ತಿಬ್ಬರು ಮಹಿಳಾ ಪೊಲೀಸರ ಮೇಲೂ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಕೂಡಲೇ ಇಬ್ಬರೂ ಟೆಕಿಗಳನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಗಾಂಜಾ ಸೇವಿಸಿದ್ದು ದೃಢಪಟ್ಟಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರನ್ನೂ ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.