ಶಬರಿಮಲೆ ಅಯ್ಯಪ್ಪ ಮಾಲೆಯಂತೆ ‘ಅಪ್ಪು ದೇವರ ಮಾಲೆ’ ಧರಿಸಲು ಹೇಳಿರುವ, ‘ಅಪ್ಪು ಹುಡುಗರು, ಡಾ: ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗದ‘ ಹೆಸರಿನಲ್ಲಿರುವ ಕರ ಪತ್ರ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದೆ.

ಕರ ಪತ್ರದಲ್ಲಿ ಮಾರ್ಚ್ 1ರಿಂದ 17ರವರೆಗೆ ಮಾಲಾಧಾರಣೆ ವ್ರತ ಆಚರಿಸಲು ಕರೆ ನೀಡಲಾಗಿದೆ. ಈ ಸಂಬಂಧ ಸಿದ್ಧಪಡಿಸಲಾದ ವ್ರತಾಚರಣೆ ನಿಯಮಗಳನ್ನು ಕರ ಪತ್ರದಲ್ಲಿ ಸೂಚಿಸಲಾಗಿದೆ.

ಮಾರ್ಚ್.17ರಂದು ಪುನೀತ್ ಹುಟ್ಟುಹಬ್ಬ ಇರುವುದರಿಂದ ಈ ವ್ರತಕ್ಕೆ ಕರೆ ನೀಡಲಾಗಿದೆ. ಅಪ್ಪು ಮಾಲೆ ಧರಿಸಿದವರು ಮಾರ್ಚ್ 18ರಂದು ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಬೇಕು ಎಂದು ಕರ ಪತ್ರದಲ್ಲಿ ಹೇಳಲಾಗಿದೆ.

‘ಅಪ್ಪು ದೇವರ ಮಾಲೆ’ ವ್ರತ ಆಚರಿಸುವವರು ಕೆಲವಷ್ಟು ನಿಯಮಗಳನ್ನು ಪಾಲಿಸಬೇಕು. ಅಪ್ಪು ಚಿತ್ರ ಹೊಂದಿರುವ ಡಾಲರ್ ಧರಿಸಬೇಕು. ಕೇಸರಿ ಶಾಲು, ಪಂಚೆ, ಶರ್ಟ್ ಧರಿಸಿ ಅಪ್ಪು ಭಾವಚಿತ್ರವನ್ನಿಟ್ಟು ಪೂಜಿಸಬೇಕು. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕಿಂತ ಮೊದಲು ಮತ್ತು ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ ಮಾಡಬೇಕು ಎಂದು ಕರೆ ಪತ್ರದಲ್ಲಿ ಹೇಳಲಾಗಿದೆ.

ಹೊಸಪೇಟೆಯಲ್ಲಿ ಪುನೀತ್ ರಾಜ್‌ಕುಮಾರ್ ಪ್ರತಿಮೆ ಇದೆ. ಅಪ್ಪು ಅಭಿಮಾನಿ ಎಂದು ಕರೆದುಕೊಂಡವರಿಂದ ಇದೇ ಊರಿನಲ್ಲಿ ನಟ ದರ್ಶನ್ ಮೇಲೆ ಇತ್ತೀಚೆಗೆ ಹಲ್ಲೆಯೂ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.