ಹೂವಿನಹಡಗಲಿ: ತಾಲ್ಲೂಕಿನ ಹಿರೇಹಡಗಲಿ-ಮಾಗಳ ಮಾರ್ಗ ಮಧ್ಯೆ ಬೈಕ್ ಸವಾರನ ಮೇಲೆ ಚಿರತೆ ಎರಗಿರುವ ಘಟನೆ ಶನಿವಾರ ಜರುಗಿದೆ.

ಮಾಗಳ ಗ್ರಾಮದ ಯುವಕ ಎಸ್.ಎಂ.ಪ್ರವೀಣ ಚಿರತೆ ದಾಳಿಯಿಂದ ಗಾಯಗೊಂಡು ಹಿರೇಹಡಗಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ನಲ್ಲಿ ಹೊರಟಿದ್ದ ಯುವಕನ ಮೇಲೆ ಚಿರತೆ ಏಕಾಏಕಿ ಎರಗಿದೆ. ನಿಯಂತ್ರಣ ತಪ್ಪಿ ಯುವಕ ಕೆಳಗೆ ಬೀಳುತ್ತಿದ್ದಂತೆ ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವವರು ಕೂಗಿಕೊಂಡಾಗ ಚಿರತೆ ಅಲ್ಲಿಂದ ಓಡಿ ಹೋಗಿದೆ.

ಈ ಪ್ರದೇಶದಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಇಲ್ಲಿ ಓಡಾಡುವ ಜನರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆಯವರು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.