ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಸಾಲ ಬಾಧೆಗೆ ತಾಲ್ಲೂಕಿನ ಮುಟುಗನಹಳ್ಳಿ ಗ್ರಾಮದ ರೈತ ಚಿದಾನಂದಪ್ಪ (50) ಗುರುವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

‘ಚಿದಾನಂದಪ್ಪ 2 ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಬ್ಯಾಡಗಿ ಮಾರುಕಟ್ಟೆಗೆ 60 ಚೀಲ ಮೆಣಸಿನಕಾಯಿ ಮಾರಾಟಕ್ಕೆ ತೆಗೆದುಕೊಂಡು ಹೋಗಿದ್ದರು. ಆದರೆ, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಕ್ಕಿರಲಿಲ್ಲ. ಇದರಿಂದ ತೀವ್ರ ಮನನೊಂದು ಜೀವ ತ್ಯಜಿಸಿದ್ದಾರೆ. ಪಟ್ಟಣದ ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್ನಲ್ಲಿ ₹1.20 ಲಕ್ಷ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದಲ್ಲಿ ₹1 ಲಕ್ಷ ಸಾಲ ಪಡೆದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮಗ್ರ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಹಶೀಲ್ದಾರ್ ಶರಣಮ್ಮ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.