ಹೊಸಪೇಟೆ (ವಿಜಯನಗರ): ಖಾಸಗಿ ರಂಗದಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಮಸೂದೆಗೆ ಉದ್ಯಮಿಗಳ ಆಕ್ಷೇಪವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಖಂಡಿಸಿದ್ದು, ರಾಜ್ಯ ಸರ್ಕಾರ ಕಾನೂನು ಜಾರಿಗೊಳಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಕನ್ನಡಿಗರಿಗೆ ಮೀಸಲಾತಿ ನೀಡುವ ಕರಡು ಮಸೂದೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ, ಆದರೆ ಖಾಸಗಿ ಕಂಪೆನಿಗಳ ಆಕ್ಷೇಪದ ನೆಪವೊಡ್ಡಿ ಸ್ವತಃ ಸರ್ಕಾರವೇ ಮಸೂದೆಯನ್ನು ತಡೆ ಹಿಡಿದಿರುವುದು ಖಂಡನೀಯ ಎಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸ್ಥಳೀಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ಆಯೋಗ ವರದಿ ನೀಡಿ ಹಲವು ದಶಕಗಳೇ ಕಳೆದಿವೆ. ಹತ್ತಾರು ವರ್ಷಗಳಿಂದ ಡಿವೈಎಫ್ಐ ಸೇರಿದಂತೆ ನಾಡಿನ ಜನಪರ ಸಂಘಟನೆಗಳು ಸ್ಥಳೀಯರಿಗೆ ಉದ್ಯೋಗ ಖಾತ್ರಿಪಡಿಸಲು ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸುತ್ತಲೇ ಬಂದಿವೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.