ಅರಸೀಕೆರೆ (ವಿಜಯನಗರ ಜಿಲ್ಲೆ): ಹೋಬಳಿಯ ಸತ್ತೂರು ಕೆರೆ ಬಳಿ ಗುರುವಾರ ಸಂಜೆ ಕೆಕೆಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಮಹಿಳೆ ಮೃತಪಟ್ಟಿದ್ದಾರೆ, 20 ಮಂದಿ ಗಾಯಗೊಂಡಿದ್ದಾರೆ.
.ವಿಜಯನಗರ | ಊರಿಗೆ ಮರಳುವಾಗ ದೇವತೆಗಳಿಗೂ ಕಣ್ಣೀರು!.
ಬಸ್ ದಾವಣಗೆರೆಯಿಂದ ಹರಪನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸತ್ತೂರು ಗ್ರಾಮದ ಹನುಮಕ್ಕ (52) ಸ್ಥಳದಲ್ಲೇ ಮೃತಪಟ್ಟರು. ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.
.ವಿಜಯನಗರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರ ಸಾವು.
ವಿಷಯ ತಿಳಿಯುತ್ತಿದ್ದಂತೆ ನೂರಾರು ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ, ಬಸ್ನೊಳಗೆ ಸಿಲುಕಿದವರನ್ನು ಹೊರಗೆ ತರಲು ಸಹಕರಿಸಿದರು. ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.ವಿಜಯನಗರ | ಕತ್ತೆ ಹಾಲು ಉದ್ಯಮದ ಜೆನ್ನಿ ಮಿಲ್ಕ್ ವಂಚನೆ: ಮೂವರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.