ಹೊಸಪೇಟೆ: ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನಲ್ಲಿ ₹70 ಕೋಟಿ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

‘ಪ್ರಸಾರಾಂಗದ ಪುಸ್ತಕಗಳ ಪ್ರಕಟಣೆ, ಸಂಶೋಧನೆ ಸೇರಿದಂತೆ ಇತರೆ ಚಟುವಟಿಕೆಗಳಿಗೆ ₹34 ಕೋಟಿ, ಯೋಜನೇತರ ಕೆಲಸಗಳಿಗೆ ₹36 ಕೋಟಿ ಅನುದಾನಕ್ಕೆ ಕೋರಲಾಗಿದೆ. ತಾತ್ಕಾಲಿಕ ನೌಕರರ ಸಂಬಳಕ್ಕಾಗಿ ₹6 ಕೋಟಿ ನೀಡುವಂತೆ ಪ್ರತ್ಯೇಕವಾಗಿ ಪತ್ರ ಬರೆಯಲಾಗಿದೆ.

ಕ್ರೀಡಾಂಗಣ, ಕಾಂಪೌಂಡ್ ನಿರ್ಮಾಣ, ಶಾಶ್ವತ ಕುಡಿಯುವ ನೀರಿನ ಯೋಜನೆ, ವಿದ್ಯುತ್ ದೀಪಗಳ ಅಳವಡಿಕೆ, ವಸತಿ ನಿಲಯ, ಅತಿಥಿ ಗೃಹ ದುರಸ್ತಿ, ನನೆಗುದಿಗೆ ಬಿದ್ದಿರುವ ಕಟ್ಟಡಗಳ ನಿರ್ಮಾಣ ಪೂರ್ಣಗೊಳಿಸುವುದು ಸೇರಿದಂತೆ ಇತರೆ ಕೆಲಸಗಳಿಗಾಗಿ ₹180 ಕೋಟಿಯ ಅಗತ್ಯವಿದೆ’ ಎಂದು ಕುಲಪತಿ ಪ್ರೊ.ಸ.ಚಿ. ರಮೇಶ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.