ಹೊಸಪೇಟೆ (ವಿಜಯನಗರ): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪರೀಕ್ಷಾರ್ಥಿಗಳು ನಿರಂತರ ಅಧ್ಯಯನ, ಸ್ವ-ಆಸಕ್ತಿ, ಕ್ಷಮತೆ ಮತ್ತು ಸಮಯ ಪರಿಪಾಲನೆಯನ್ನು ರೂಢಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ಭಾಷಾ ವಿಭಾಗದ ಡೀನ್ ಪ್ರೊ.ಎಫ್.ಟಿ.ಹಳ್ಳಿಕೇರಿ ಹೇಳಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಹಾಗೂ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಎರಡು ವಾರಗಳ ಕಾಲ ಆಯೋಜಿಸಿದ್ದ ಯುಜಿಸಿ ನೆಟ್ ಮತ್ತು ಕೆ-ಸೆಟ್ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ಕ್ರಮ ಮತ್ತು ಆಸ್ವಾದಿಸುವ ಕ್ರಮ ತುಂಬಾ ಮುಖ್ಯ. ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಲಕ್ಷ್ಯಕೊಟ್ಟು ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ಮುಂದಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವನ್ನು ಆರಂಭಿಸಲು ಕುಲಪತಿ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದರು.

ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ.ಯರ್ರಿಸ್ವಾಮಿ ಅವರು ಕಾರ್ಯಕ್ರಮದ ವರದಿ ಮಂಡಿಸಿದರು. ಈ ಕಾರ್ಯಾಗಾರದಲ್ಲಿ 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.

ನೋಂದಣಿಯಾಗಿದ್ದಾರೆ. ಇದರಲ್ಲಿ ಶೇ.65 ರಷ್ಟು ವಿದ್ಯಾರ್ಥಿಗಳು ಮತ್ತು ಶೇ.35 ರಷ್ಟು ವಿದ್ಯಾರ್ಥಿನಿಯರು ಭಾಗವಹಿಸಿದ್ದಾರೆ. ಈ ಕಾರ್ಯಗಾರದಲ್ಲಿ ಈಗಾಗಲೇ ನೆಟ್, ಜೆಆರ್ಎಫ್ ಪರೀಕ್ಷೆಗಳಲ್ಲಿ ತೇರ್ಗಡೆಯಾದ ಹಿರಿಯ ವಿದ್ಯಾರ್ಥಿಗಳನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಬಳಸಿಕೊಂಡು, ಅವರ ಮೂಲಕ ಉಪನ್ಯಾಸಗಳನ್ನು ನೀಡಲಾಯಿತು ಎಂದರು.

ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಮಲ್ಲಿಕಾರ್ಜುನಗೌಡ, ಪ್ರಾಧ್ಯಾಪಕರಾದ ಪ್ರೊ.ವೆಂಕಟಗಿರಿ ದಳವಾಯಿ, ಪ್ರೊ.ಗೋವಿಂದ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.