ಹೊಸಪೇಟೆ (ವಿಜಯನಗರ): ‘ಶಿವಮೊಗ್ಗದ ತುಂಗಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿಸುತ್ತಿರುವುದರಿಂದ ಜಿಲ್ಲೆಯ ನದಿ ತೀರದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹೇಶಬಾಬು ತಿಳಿಸಿದ್ದಾರೆ.

‘ತುಂಗಾ ಜಲಾಶಯದಿಂದ ತುಂಗಭದ್ರಾ ನದಿಗೆ 59,446 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯೂ ಇದೆ. ಮೀನುಗಾರಿಕೆ ಸೇರಿದಂತೆ ಇತರೆ ಕಾರಣಗಳಿಗಾಗಿ ಜನ ನದಿಗೆ ಇಳಿಯಬಾರದು. ಜಿಲ್ಲೆಯ ಹರಪನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿಯ ನದಿ ತೀರದ ಗ್ರಾಮಗಳಲ್ಲಿ ಡಂಗುರ ಸಾರಬೇಕು. ಕಾಳಜಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಆಯಾ ತಾಲ್ಲೂಕಿನ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌ಗಳಿಗೆ ಗುರುವಾರ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.