ಹರಪನಹಳ್ಳಿ (ವಿಜಯನಗರ): 'ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲು ನಾನು ಕೂಡ ನಿಮ್ಮೊಂದಿಗೆ ಕೆಲಸ ಮಾಡಲು ಸಿದ್ಧ' ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಶಾಸಕ ಕರುಣಾಕರ ರೆಡ್ಡಿ ಜನ್ಮದಿನದ ಪ್ರಯುಕ್ತ ಭಾನುವಾರ ಇಲ್ಲಿ ಆಯೋಜಿಸಿದ್ದ ಸೀತಾರಾಮ ಕಲ್ಯಾಣ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಶಾಸಕ, ಸಚಿವ, ಸಿಎಂ ಆಗಬೇಕೆಂಬ ಆಸೆ ಇಲ್ಲ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿ.ಎಂ. ಮಾಡಲು ಶ್ರಮಿಸಿದ್ದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ. ಖಂಡಿತವಾಗಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.

ಇದನ್ನೂ ಓದಿ:ಅನೇಕ ವರ್ಷಗಳ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಜನಾರ್ದನ ರೆಡ್ಡಿ ಸಹೋದರರು

ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಲಿ. ಹಿರಿಯರು, ಬುದ್ಧಿವಂತ ಕರುಣಾಕರ ರೆಡ್ಡಿ ಅವರನ್ನು ಸಚಿವರಾಗಿ ಮಾಡಬೇಕು. ಹರಪನಹಳ್ಳಿಯಲ್ಲಿ ಅವರೊಂದಿಗೆ ಹೆಜ್ಜೆ ಹಾಕಿ ಕೆಲಸ ಮಾಡುತ್ತೇನೆ. ಪ್ರತಿಯೊಂದು ಹಳ್ಳಿಗೆ ಭೇಟಿ ಕೊಡುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.