ಹೊಸಪೇಟೆ (ವಿಜಯನಗರ): ಬಳ್ಳಾರಿ ಲೋಕಸಭಾ ಕ್ಷೇತ್ರದ ಭಾಗವಾಗಿರುವ ವಿಜಯನಗರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಬಿಸಿಲೇರುವ ಮೊದಲೇ ತಮ್ಮ ಹಕ್ಕನ್ನು ಚಲಾಯಿಸಲು ಮತದಾರರು ಮತಗಟ್ಟೆಯತ್ತ ಧಾವಿಸತೊಡಗಿದ್ದಾರೆ.

ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮತಗಟ್ಟೆಯಲ್ಲಿ ಬೆಳಿಗ್ಗೆ 7 ಗಂಟೆಗೇ ಸರದಿ ಸಾಲು ಕಾಣಿಸಿತು.

ಸೋಮವಾರ ಈ ಭಾಗದಲ್ಲಿ 44 ಡಿಗ್ರಿ ಸೆಂಟಿಗ್ರೇಡ್ ಉಷ್ಣಾಂಶ ಇತ್ತು. ಮಂಗಳವಾರ ಉಷ್ಣಾಂಶದಲ್ಲಿ ಕೊಂಚ ಇಳಿಕೆ ಇರಬಹುದು ಎಂಬ ಮುನ್ಸೂಚನೆ ಇದ್ದರೂ ಬಿಸಿಗಾಳಿ, ಉರಿ ಸೆಖೆಯ ಕಾರಣಕ್ಕೆ ಮತದಾರರು 11 ಗಂಟೆಯೊಳಗೆಯೇ ಮತಗಟ್ಟೆಗೆ ತೆರಳಿ ಮತದಾನ ಮಾಡುವುದು ಉತ್ತಮ ಎಂದು ಜಿಲ್ಲಾಡಳಿತ ಸಲಹೆ ನೀಡಿದೆ. ಹೀಗಾಗಿ ಬೆಳಿಗ್ಗೆ ಹೊತ್ತಲ್ಲಿ ಹಾಗೂ ಸಂಜೆ ಬಿಸಿಲಿನ ಝಳ ಸ್ವಲ್ಪ ಕಡಿಮೆಯಾದ ಬಳಿಕ ಮತ ಚಲಾಯಿಸಲು ಜನ ಮತಗಟ್ಟೆಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ.

ಕ್ಷೇತ್ರದಲ್ಲಿ ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿಯ ಬಿ.ಶ್ರೀರಾಮುಲು ಮತ್ತು ಕಾಂಗ್ರೆಸ್ನ ಇ.ತುಕಾರಾಂ ನಡುವೆ ನೇರ ಹಣಾಹಣಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.