ಹೊಸಪೇಟೆ (ವಿಜಯನಗರ): ವಿಶ್ವಪ್ರಸಿದ್ಧ ಹಂಪಿ ಜೈನ್ ದೇವಾಲಯದ ಸ್ಮಾರಕದ ಮೇಲೇರಿ ಡಾನ್ಸ್ ಮಾಡಿ, ಅದರ ವಿಡಿಯೊ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನನ್ನು ಹಂಪಿ ಪ್ರವಾಸಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕಾಳೇನಹಳ್ಳಿಯ ದೀಪಕ್‌ಗೌಡ (25) ಬಂಧಿತ ಯುವಕ. ಇತ್ತೀಚೆಗೆ ಹಂಪಿಗೆ ಬಂದಿದ್ದ ದೀಪಕ್‌ಗೌಡ ಹಂಪಿ ಜೈನ್ ದೇವಾಲಯದ ಮೇಲೆ ಹಾಗೂ ಅದರ ಪರಿಸರದಲ್ಲಿ ವಿಡಿಯೊ ಚಿತ್ರೀಕರಿಸಿ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದ. ಈ ಸಂಬಂಧ ಫೆ. 28ರಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ಎಂ.ಸಿ. ಸುನೀಲ್‌ಕುಮಾರ್ ಅವರು ಹಂಪಿ ಪ್ರವಾಸಿ ಠಾಣೆಗೆ ದೂರು ಕೊಟ್ಟಿದ್ದರು. ಆ ದೂರು ಆಧರಿಸಿ ದೀಪಕ್‌ಗೌಡನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ತಿಳಿಸಿದ್ದಾರೆ.

‘ಹಂಪಿಯಲ್ಲಿರುವ ಸ್ಮಾರಕಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಕೇಂದ್ರ ಸರ್ಕಾರ ಘೋಷಿಸಿದೆ. ಇಲ್ಲಿಗೆ ಬರುವ ಪ್ರವಾಸಿಗರು ಸ್ಮಾರಕಗಳನ್ನು ಹಾನಿಗೊಳಿಸುವುದು, ವಿರೂಪಗೊಳಿಸಿದರೆ ಎರಡು ವರ್ಷ ಜೈಲು ಶಿಕ್ಷೆ ಇದೆ’ ಎಂದು ತಿಳಿಸಿದ್ದಾರೆ.
ದೀಪಕ್‌ಗೌಡ, ಬೇಲೂರು, ಹಳೆಬೀಡು, ಪಟ್ಟದಕಲ್ಲು, ಬಾದಾಮಿ ಸೇರಿದಂತೆ ಇತರೆ ಸ್ಮಾರಕಗಳ ಬಳಿಯೂ ಇದೇ ರೀತಿ ವಿಡಿಯೊ ಚಿತ್ರೀಕರಿಸಿದ್ದ. ಹಂಪಿಯಲ್ಲಿ ನಡೆದ ಘಟನೆ ನಂತರ ಟೀಕೆ ವ್ಯಕ್ತವಾಗಿತ್ತು. ಪೊಲೀಸರಿಗೆ ದೂರು ಸಲ್ಲಿಕೆಯಾಗಿದ್ದ ನಂತರ ಕ್ಷಮೆ ಕೂಡ ಯಾಚಿಸಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.