ಹೊಸಪೇಟೆ (ವಿಜಯನಗರ): ‘ಮೇಕೆದಾಟು ಯೋಜನೆ ಜಾರಿಗೆ ಯಾರಪ್ಪನ ಅಪ್ಪಣೆಯೂ ಬೇಕಿಲ್ಲ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರು ಅವರ ರಾಜ್ಯದ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ್ದಾರೆ. ಈ ವಿಚಾರ ಸದ್ಯ ಸುಪ್ರೀಂಕೋರ್ಟ್ ಅಂಗಳದಲ್ಲಿ ಇರುವುದರಿಂದ ಹೆಚ್ಚಿಗೆ ಮಾತನಾಡಲಾರೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಪ್ರತಿಕ್ರಿಯಿಸಿದರು.

ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಖಾತೆ ಹಂಚಿಕೆಯ ಗೊಂದಲದ ಬಗ್ಗೆ ನಾನು ಯಾವುದೇ ರೀತಿಯ ವ್ಯಾಖ್ಯಾನ ಮಾಡುವುದಿಲ್ಲ. ಅದನ್ನು ಸಿ.ಎಂ. ಸಮರ್ಥವಾಗಿ ನಿಭಾಯಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

ಖಾತೆ ಬದಲಿಸಬೇಕೆಂದು ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಅವರು ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಗೈರಾಗಿರುವುದರ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಅದರ ಬಗ್ಗೆ ನಾನೇನೂ ಮಾತನಾಡಲಾರೆ. ಸಿ.ಎಂ ಬಗೆಹರಿಸುತ್ತಾರೆ ಎಂದರು.

ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಶಾಸಕ ಬಸವರಾಜ ಧಡೇಸುಗೂರು ಇದ್ದರು.

ಆನಂದ್ ಸಿಂಗ್ ಗೈರು: ವಿಜಯನಗರ ಕ್ಷೇತ್ರ ವ್ಯಾಪ್ತಿಯ ತುಂಗಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸುವ ಕಾರ್ಯ್ರಮಕ್ಕೆ ಸಚಿವ ಆನಂದ್ ಸಿಂಗ್ ಗೈರು ಹಾಜರಾದರು. ಅವರು ಮಂಗಳವಾರ ಬೆಳಿಗ್ಗೆ ಯಲ್ಲಾಪುರಕ್ಕೆ ಪಯಣ ಬೆಳೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.