ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ ಸಮುದಾಯದವರು ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಂತ ಸೇವಾಲಾಲ್ ಬಂಜಾರ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ, ಅಖಿಲ ಭಾರತ ಬಂಜಾರ ಸೇವಾ ಸಂಘದಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತಾಲ್ಲೂಕಿನ ವಿವಿಧ ತಾಂಡಾಗಳ ಜನರು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರ್ಯಾಲಿ ನಡೆಸಿದ ಅವರು, ರಾಜ್ಯಪಾಲರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್ಗೆ ಸಲ್ಲಿಸಿ, ತನ್ನ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು.

ಇನ್ನು, ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ದೊಡ್ಡತಾಂಡಾದ ಬಂಜಾರ ಸಮುದಾಯದವರು ಮತದಾನ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಚುನಾವಣಾ ಅಧಿಕಾರಿಗಳು ಸೋಮವಾರ ಸಭೆ ಕರೆದು ಮಾಡಿದ ಮನವಿಯನ್ನು ಬಂಜಾರ ಸಮುದಾಯದವರು ಪುರಸ್ಕರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.