ಹೊಸಪೇಟೆ (ವಿಜಯನಗರ): ‘ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಿರುವ
ಒಂದು ದೇಶ-ಒಂದು ಚುನಾವಣೆ ಕಾರ್ಯರೂಪಕ್ಕೆ ತರಲು ಅಸಾಧ್ಯ, ಚುನಾವಣಾ ಆಯೋಗಕ್ಕೂ ಇದಕ್ಕೆ ಅಗತ್ಯವಾದ ತಾಂತ್ರಿಕ ನೈಪುಣ್ಯ ಇಲ್ಲ’ ಎಂದು ಜಿಲ್ಲಾ ಕಾಂಗ್ರೆಸ್ ಘಟಕ ಹೇಳಿದೆ.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ ಅವರು ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದ್ದು, ಲೋಕಸಭೆ, ವಿಧಾನಸಭೆ ಚುನಾವಣೆ ಜತೆಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಮಾಡುವುದು ಸರಿಯಲ್ಲ, ಇದರಿಂದ ದೇಶದ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣ ನಾಶ ಮಾಡಿದಂತಾಗುತ್ತದೆ. ಪ್ರಸ್ತುತ ದೇಶದ ಹಣಕಾಸಿನ ಪರಿಸ್ಥಿತಿಯೂ ಇದಕ್ಕೆ ತಕ್ಕಂತೆ ಇಲ್ಲ ಎಂದು ಹೇಳಿದ್ದಾರೆ.

‘ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ಆಗಬೇಕು, ಸಾಧಕ ಬಾಧಕಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಬೇಕಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.