ತೋರಣಗಲ್ಲು: ಹೋಬಳಿಯ ಹಳೆಮಾದಾಪುರ, ಹಳೆದರೋಜಿ, ಹೋಸದರೋಜಿ ಗ್ರಾಮಗಳಲ್ಲಿ ಅಕಾಲಿಕ ಮಳೆಗೆ ಹಾನಿಯಾಗಿ ನೆಲ ಕಚ್ಚಿದ ಭತ್ತದ ಜಮೀನುಗಳಿಗೆ ಶನಿವಾರ ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶುಕ್ರವಾರ ಸುರಿದ ಅಕಾಲಿಕ ಮಳೆಗೆ ಹಳೆದರೋಜಿ, ಹಳೆಮಾದಾಪುರ, ಹೊಸದರೋಜಿ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರ ಜಮೀನುಗಳಲ್ಲಿನ ಸುಮಾರು 200 ಎಕರೆಯ ಭತ್ತದ ಬೆಳೆಯು ಸಂಪೂರ್ಣವಾಗಿ ನೆಲ ಕಚ್ಚಿದೆ.

‘ಭತ್ತ ಫಸಲು ಉತ್ತಮವಾಗಿ ಬೆಳೆದಿತ್ತು, ಅಧಿಕ ಲಾಭದ ನಿರೀಕ್ಷೆಯಲ್ಲಿದ್ದೇವು ಆದರೆ ಅಕಾಲಿಕ ಮಳೆಗೆ ಭತ್ತದ ಬೆಳೆಯು ನೆಲ ಕಚ್ಚಿದ್ದರಿಂದ ರೈತರು ಹೆಚ್ಚಿನ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರವು ಪ್ರತಿ ಎಕರೆಗೆ ₹15 ಸಾವಿರದಿಂದ ₹ 20 ಸಾವಿರ ಬೆಳೆ ನಷ್ಟ ಪರಿಹಾರ ನೀಡಬೇಕು’ ಎಂದು ಹಳೆದರೋಜಿ ಗ್ರಾಮದ ಎಂ.ರಾಮು ಒತ್ತಾಯಿಸಿದ್ದಾರೆ.

‘ಅಕಾಲಿಕ ಮಳೆಯಿಂದ ನೆಲ ಕಚ್ಚಿದ ಭತ್ತದ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ರೈತರ ಬಳಿ ಮಾಹಿತಿ ಪಡೆಯಲಾಗಿದೆ. ದರೋಜಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಅಂದಾಜು 200 ಎಕರೆ ಭತ್ತದ ಬೆಳೆ ನೆಲ ಕಚ್ಚಿದೆ. ಬೆಳೆ ನಷ್ಟ ಪರಿಹಾರಕ್ಕಾಗಿ ವೈಯಕ್ತಿಕವಾಗಿ ಬೆಳೆ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ತೋರಣಗಲ್ಲು ಗ್ರಾಮದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಂತೋಷ್ಕುಮಾರ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.