ಹೊಸಪೇಟೆ: ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಅವರು ಹಂಪಿಯ ಕನ್ನಡ ವಿಶ್ವವಿದ್ಯಾಲಯ ನಡೆಸಿದ ಪಿಎಚ್.ಡಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಉತ್ತೀರ್ಣರಾಗಿದ್ದಾರೆ.

ಬೆಳಗಾವಿಯ ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳುವ ಸಲುವಾಗಿ ಕನ್ನಡ ಭಾಷಾ ವಿಷಯದಲ್ಲಿ ಅವರು ಪರೀಕ್ಷೆ ಬರೆದಿದ್ದರು. 981 ಅಭ್ಯರ್ಥಿಗಳ ಪೈಕಿ 259 ಮಂದಿ ಉತ್ತೀರ್ಣರಾಗಿದ್ದು, ಅದರಲ್ಲಿ ಪವಿತ್ರಾ ಲೋಕೇಶ್ ಸಹ ಒಬ್ಬರಾಗಿದ್ದಾರೆ.

ಮೆರಿಟ್ ಪಟ್ಟಿಯಲ್ಲಿ ಪವಿತ್ರಾ ಅವರ ಹೆಸರಿಲ್ಲ. ಜ್ಯೇಷ್ಠತಾ ಪಟ್ಟಿ ಮತ್ತು ಕಾಯ್ದಿರಿಸಿದ ಪಟ್ಟಿಯಲ್ಲಿ ಸಹ ಅವರ ಹೆಸರಿಲ್ಲ. ಹೀಗಾಗಿ ಪ್ರವೇಶ ದೊರೆಯುವುದು ಅಷ್ಟು ಸುಲಭವಲ್ಲ ಎಂದು ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.