ಹೊಸಪೇಟೆ (ವಿಜಯನಗರ): ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ನ.16 ಕನ್ನಡ ಭಾಷಾ ಪರೀಕ್ಷೆ ಮತ್ತು 17 ಸ್ಪರ್ಧಾತ್ಮಕ ಪರೀಕ್ಷೆಗೆ ಜಿಲ್ಲೆ ಸಜ್ಜಾಗಿದೆ. ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ನಿಯಮಗಳನ್ನು ಕಡ್ಡಾಯ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚನೆ ನೀಡಿದ್ದಾರೆ.

16ರಂದು 24 ಕೇಂದ್ರಗಳಲ್ಲಿ ಹಾಗೂ 17ರಂದು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊದಲ ದಿನ 8,214 ಮಂದಿ ಹಾಗೂ 2ನೇ ದಿನ 12,036 ಮಂದಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆ ಇದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಅವರು ಶುಕ್ರವಾರ ಇಲ್ಲಿ ನಡೆದ ಸಭೆಯಲ್ಲಿ ತಿಳಿಸಿದರು.

ಎಡಿಸಿ ಇ.ಬಾಲಕೃಷ್ಣಪ್ಪ, ಎಎಸ್ಪಿ ಸಲೀಂ ಪಾಷಾ, ಎಸಿ ಪಿ.ವಿವೇಕಾನಂದ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ನೋಡಲ್ ಅಧಿಕಾರಿ ಹುಲಿಬಂಡಿ ಇತರರಿದ್ದರು.

ಸೌರ ಫಲಕಗಳನ್ನು ಸ್ಥಾಪಿಸಲು ಶೇ60ರಷ್ಟು ಸಹಾಯಧನ

ಹೊಸಪೇಟೆ (ವಿಜಯನಗರ): ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ ಬಿಜಲಿ ಯೋಜನೆಯ ಅಡಿಯಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಮಾನದಂಡ ವೆಚ್ಚದ ಶೇ60 ರಷ್ಟು ಸಹಾಯಧನ ಒದಗಿಸಲಾಗುವುದು.

ಮಾಹಿತಿಗಾಗಿ 1912ಗೆ ಕರೆಮಾಡಿ ಅಥವಾ ಹತ್ತಿರದ ಜೆಸ್ಕಾಂ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನ ನಗರ ವಿಭಾಗದ ಇಇ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೇಖಕರಿಂದ ಪುಸ್ತಕ ನೋಂದಣಿಗೆ ಅವಕಾಶ

ಹೊಸಪೇಟೆ (ವಿಜಯನಗರ): 2024ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಯಾವುದೇ ಭಾಷೆಯ ಪುಸ್ತಕಗಳ ನೋಂದಣಿ ಮಾಡಿಸಬಹುದಾಗಿದೆ.

ನೋಂದಣಿ ಮಾಡಿಸಿದ ಪುಸ್ತಕಗಳನ್ನು ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು. ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ 2025ರ ಜನವರಿ 1 ಸಂಜೆ 5.30ರ ಒಳಗಾಗಿ ನೋಂದಣಿ ಮಾಡಿಸಲು ಅವಕಾಶವಿದೆ.

ಮಾಹಿತಿಗಾಗಿ 080-22864990, 22867358 ಮತ್ತು ಹೊಸಪೇಟೆ ಜಿಲ್ಲಾ ಕ್ರೀಡಾಂಗಣ ಹತ್ತಿರದ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತೋಟಗಾರಿಕೆ ಚಟುವಟಿಕೆಗಳಿಗೆ ಅರ್ಜಿ ಅಹ್ವಾನ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಗಣಿಭಾದಿತ 33 ಗ್ರಾಮಗಳಲ್ಲಿ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ (ಸಿಇಪಿಎಂಐಜೆಡ್) ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಆಸಕ್ತ ರೈತರಿಂದ ಅರ್ಜಿ ಅಹ್ವಾನಿಸಿದೆ.

ಮಾಹಿತಿಗಾಗಿ ರೈತರು ಆಯಾ ಹೋಬಳಿಯ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.