ಹೊಸಪೇಟೆ (ವಿಜಯನಗರ): ‘ಈಗಿನ ಸಂದರ್ಭದಲ್ಲಿ ನರೇಂದ್ರ ಮೋದಿಯವರು ದೇಶದ ಪ್ರಧಾನಿ ಆಗಿರದಿದ್ದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹200ರಿಂದ ₹250 ಆಗುತ್ತಿತ್ತು’ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.

ಇಲ್ಲಿನ ರೈಲು ನಿಲ್ದಾಣದಲ್ಲಿ ಸೋಮವಾರ ಡೆಮು ರೈಲಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರು, ‘ಸತತವಾಗಿ ತೈಲ ದರ ಏರಿಕೆಯಾಗುತ್ತಿರುವುದರ ಬಗ್ಗೆ ನೀವೇನೂ ಹೇಳುವಿರಿ’ ಎಂದು ಕೇಳಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.

ಮೋದಿಯವರ ಬದಲಾಗಿ ಯಾರೇ ಅಧಿಕಾರದಲ್ಲಿ ಇದ್ದಿದ್ದರೆ ಪೆಟ್ರೋಲ್ ₹200ರಿಂದ ₹250 ಹಾಗೂ ಡೀಸೆಲ್ ದರ ₹150 ಇರುತ್ತಿತ್ತು. ಮೋದಿಯವರು ಟೀಂ ವರ್ಕ್, ಹಾರ್ಡ್ ವರ್ಕ್ ಮತ್ತು ನೆಟ್‌ವರ್ಕ್ ಮೂಲಕ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ತೈಲ ದರ ಹೆಚ್ಚಳವಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದಾರೆ ಎಂದರು.

‘ಪ್ರತಿಯೊಬ್ಬರೂ ಸ್ವಾರ್ಥಕ್ಕಾಗಿ ವಾಕ್ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಪ್ರಶ್ನೆಗೆ ಚುಟುಕಾಗಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.