ಹೊಸಪೇಟೆ (ವಿಜಯನಗರ): ಸಾರ್ವತ್ರಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಸೆಪ್ಟೆಂಬರ್ 17ರಿಂದ 19ರವರೆಗೆ ಚಿಕ್ಕಬಳ್ಳಾಪುರದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ನ (ಎಸ್ಎಫ್ಐ) ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಅಮರೇಶ ಕಡಗದ್ ಹೇಳಿದರು.

ಮಂಗಳವಾರ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಎಸ್‌ಎಫ್‌ಐ ದೇಶದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆ. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.

ಆಳುವ ಸರ್ಕಾರಗಳು ದೇಶದ ಮತ್ತು ರಾಜ್ಯ ಬಜೆಟ್ ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣವನ್ನು ಬಲಹೀನಗೊಳಿಸುತ್ತಿವೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗೀ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಾಳ ಮಾತನಾಡಿ, ಬಡ, ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಸಿಗಬೇಕಾದ ವಿದ್ಯಾರ್ಥಿ ವೇತನ, ಫೆಲೋಷಿಪ್ ಗಳನ್ನು ನಿಲ್ಲಿಸಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಪದಾಧಿಕಾರಿಗಳಾದ ರಮೇಶ ವೀರಾಪೂರು, ಗಣೇಶ ರಾಠೋಡ್, ದೊಡ್ಡ ಬಸವರಾಜ ಗುಳೇದಾಳ, ಶಿವಪ್ಪ ಕೋಲಾರ, ಸೋಮಶೇಖರ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.