ಹಗರಿಬೊಮ್ಮನಹಳ್ಳಿ/ಹೊಸಪೇಟೆ (ವಿಜಯನಗರ ಜಿಲ್ಲೆ): ‘ಕಾಂಗ್ರೆಸ್ಸಿನವರ ದಮ್ಮು, ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಾಯಿ ಮರಿ ತರಹ ಮಾಡುತ್ತಾರೆ. ಗಡಗಡ ಎಂದು ನಡುಗುತ್ತಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹಗರಿಬೊಮ್ಮನಹಳ್ಳಿಯಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಮಾಲವಿ ಜಲಾಶಯದ ವಿಜಯೋತ್ಸವ ಹಾಗೂ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 15ನೇ ಹಣಕಾಸಿನ ಆಯೋಗದ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ ₹5,495 ಕೋಟಿ ವಿಶೇಷ ಅನುದಾನ ಕೇಂದ್ರ ಸರ್ಕಾರ ಕೊಡಬೇಕೆಂದು ಶಿಫಾರಸು ಮಾಡಲಾಗಿದೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಅವರು ಅನುದಾನ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ‘ಆಪರೇಷನ್ ಕಮಲ’ದ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಆ ಅನುದಾನ ತರುವ ತಾಕತ್ತು, ದಮ್ಮು ಇದೆಯೇ? ರಾಜ್ಯದ ಅನೇಕ ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ ಸರ್ಕಾರ ಅನುದಾನ ಕೊಡುತ್ತಿಲ್ಲ. ರಾಜ್ಯವನ್ನು ಪ್ರತಿನಿಧಿಸುವ 25 ಜನ ಸಂಸದರಿದ್ದರೂ ಏನೂ ಆಗುತ್ತಿಲ್ಲ ಎಂದರು.

ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಎಲ್ಲ ನೀರಾವರಿ ಯೋಜನೆಗಳನ್ನು ನಿರ್ಲಕ್ಷಿಸಿದೆ. 2020ರ ಫೆಬ್ರುವರಿಯಲ್ಲಿ ಮಹದಾಯಿ ಯೋಜನೆ ಗೆಜೆಟ್ ನೋಟಿಫಿಕೇಶನ್ ಆಗಿತ್ತು. ₹93 ಕೋಟಿ ಮೊತ್ತದ ಮಹದಾಯಿ ಯೋಜನಾ ವೆಚ್ಚ ಈಗ ₹1,677 ಕೋಟಿಗೆ ಏರಿಕೆಯಾಗಿದೆ.

2023ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ₹2 ಲಕ್ಷ ಕೋಟಿ ಖರ್ಚು ಮಾಡಿ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಮುಗಿಸಲಾಗುವುದು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರತಿಯೊಬ್ಬರಿಗೂ ಉಚಿತವಾಗಿ ನೀಡಲಾಗುತ್ತಿದ್ದ 7 ಕೆ.ಜಿ. ಅಕ್ಕಿ ಪ್ರಮಾಣವನ್ನು ಬಿಜೆಪಿ ಸರ್ಕಾರ 5 ಕೆ.ಜಿ.ಗೆ ಇಳಿಸಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುವುದು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಮಲಗಬಾರದು. ಹಸಿವು ಮುಕ್ತ ಕರ್ನಾಟಕ ಆಗಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.