ಹೊಸಪೇಟೆ (ವಿಜಯನಗರ): ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಸತತ ಮೂರನೇ ದಿನವಾದ ಶನಿವಾರ ಸಹ ಲಕ್ಷ ಕ್ಯುಸೆಕ್ ಮೀರಿದ್ದು, 65.11 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಜಲಾಶಯ ಬಹಳ ಬೇಗ ತುಂಬುತ್ತಿರುವುರಿಂದ ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರದಿಂದ ಇರಬೇಕು ಎಂದು ತುಂಗಭದ್ರಾ ಮಂಡಳಿ ಶನಿವಾರ ಬೆಳಿಗ್ಗೆ ಸಾರ್ವಜನಿಕ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ.

1,633 ಅಡಿ ಎತ್ತರದ ತುಂಗಭದ್ರಾ ಅಣೆಕಟ್ಟೆಯಲ್ಲಿ ಸದ್ಯ ನೀರಿನ ಮಟ್ಟ 1,621.32 ಅಡಿ ತಲುಪಿದೆ. ಆಣೆಕಟ್ಟೆ ಭರ್ತಿಯಾಗಲು ಇನ್ನು 12 ಅಡಿಯಷ್ಟೇ ಬಾಕಿ ಉಳಿದಿದೆ.

ಜುಲೈ 1ರಂದು ಅಣೆಕಟ್ಟೆಯ ನೀರಿನ ಮಟ್ಟ 1,,584.15 ಅಡಿಯಷ್ಟಿತ್ತು. ಕೇವಲ 10 ದಿನಗಳಲ್ಲಿ ನೀರಿನ ಮಟ್ಟ 37 ಅಡಿಗಳಷ್ಟು ಹೆಚ್ಚಳವಾಗಿದೆ. ಜಲಾಶಯದ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯ 105.78 ಟಿಎಂಸಿ ಅಡಿ. ಜುಲೈ 1ರಂದು ಜಲಾಶಯದಲ್ಲಿ 6.78 ಟಿಎಂಸಿ ಅಡಿಯಷ್ಟು ಮಾತ್ರ ನೀರಿತ್ತು. 20 ದಿನದಲ್ಲಿ ನೀರಿನ ಪ್ರಮಾಣ 10 ಪಟ್ಟು ಅಧಿಕವಾಗಿದೆ.

ಮೋಡ ಕವಿದ ವಾತಾವರಣ:

ವಿಜಯನಗರ ಜಿಲ್ಲೆಯಲ್ಲಿ ಶನಿವಾರವೂ ಮೋಡ ಮುಸುಕಿದ ವಾತಾವರಣವಷ್ಟೇ ಇದ್ದು, ಕೆಲವೆಡೆ ತುಂತುರು ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ಹೀಗೆಯೇ ಮಳೆ ಮುಂದುವರಿದರೆ ಇನ್ನು ನಾಲ್ಕೈದು ದಿನಗಳಲ್ಲೇ ತುಂಗಭದ್ರಾ ಜಲಾಶಯ ಭರ್ತಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.