ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೈದರಾಬಾದ್‌ ನಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದ ₹2.93 ಕೋಟಿ ನಗದು ವಶ

Published 19 ಮಾರ್ಚ್ 2024, 8:24 IST
Last Updated 19 ಮಾರ್ಚ್ 2024, 8:24 IST
ಅಕ್ಷರ ಗಾತ್ರ

ವಿಜಯಪುರ: ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಟೊಯೋಟಾ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2,93,50,000 ನಗದನ್ನು ವಿಜಯಪುರ ಸಿಇಎನ್ ಕ್ರೈಂ ಪೊಲೀಸರು ಸೋಮವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಹಣವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ‌ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುನೀಲ್ ಕುಮಾರ್ ನಂದೇಶ್ವರ ಮತ್ತು ಸಿಬ್ಬಂದಿ ನಗರದ ಸಿಂದಗಿ ಬೈಪಾಸ್ ನಲ್ಲಿ ಕಾರನ್ನು ಅಡ್ಡಗಟ್ಟಿ ತಪಾಸಣೆ ಮಾಡಿದಾಗ ನಗದು ಪತ್ತೆಯಾಗಿದೆ.

ಮಹಾರಾಷ್ಟ್ರ ನೋಂದಾಣಿ ಇರುವ ಎಂ.ಎಚ್.01 ಸಿಡಿ 7537 ಸಂಖ್ಯೆಯ ಟೊಯೋಟಾ ಕಾರಿನಲ್ಲಿ ಸಾಂಗಲಿಯ ಬಾಲಾಜಿ ನಿಕ್ಕಂ ಮತ್ತು ಸಚಿನ್ ಮೋಹಿತೆ ಎಂಬುವವರು ಹಣವನ್ನು ಸಾಗಿಸುತ್ತಿದ್ದರು. ಸೂಕ್ತ ದಾಖಲೆಯನ್ನು ಒದಗಿಸದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT