ವಿಜಯಪುರ: ನವದೆಹಲಿಯ ಏಮ್ಸ್(AIIMS) ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಡಿಎಂ–ಜನರಲ್ ಕ್ರಿಟಿಕಲ್ ಕೇರ್ ಮೆಡಿಷಿನ್ ವಿಭಾಗ(DM- GENERAL CRITICAL CARE MEDICINE)ದಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯಾ ಅರವಿಂದ ಹಿರೊಳ್ಳಿ ರಾಷ್ಟ್ರಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.

ಏಮ್ಸ್ ನವೆಂಬರ್ 20ರಂದು ಪ್ರವೇಶ ಪರೀಕ್ಷೆ ನಡೆಸಿತ್ತು. ದಿವ್ಯಾ ಹಿರೊಳ್ಳಿ ಶೇ 67.08 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ನಿರೀಕ್ಷೆಯಂತೆ ರ್‍ಯಾಂಕ್ ಬಂದಿದೆ. ಪ್ರಥಮ ರ್‍ಯಾಂಕ್ ಬಂದಿರುವುದು ಖುಷಿಯನ್ನು ಇಮ್ಮಡಿಗೊಳಿಸಿದೆ. ಮೂರು ವರ್ಷಗಳ ಈ ಕೋರ್ಸ್ ಸಂಪೂರ್ಣ ಉಚಿತವಾಗಿದೆ. ಭವಿಷ್ಯದಲ್ಲಿ ಕ್ರಿಟಿಕಲ್ ಕೇರ್‌ನಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂಬುದು ಆಶಯವಾಗಿದೆ ಎಂದು ಹೇಳಿದರು.

ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿರುವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿರುವ ದಿವ್ಯಾ ಅವರು ಬಿಎಲ್‌ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ(2012), ಹುಬ್ಬಳ್ಳಿ ಕಿಮ್ಸ್‌ನಲ್ಲಿ ಎಂಡಿ(2016), ಪಾಂಡಿಚೇರಿಯ ಜಿಪ್‌ಮೇರ್(JIPMER)ನಲ್ಲಿ ಫೆಲೋಶಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಫೆಲೊಶಿಪ್ ಇನ್ ನಿರೊ ಕ್ರಿಟಿಕಲ್ ಕೇರ್ ಪಡೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.