ನಾಲತವಾಡ: ಪಟ್ಟಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಸವೇಶ್ವರ ಪ್ರತಿಮೆ ಸ್ಥಾಪಿಸಬೇಕೆಂಬ ಜನರ ಬಹುದಶಕಗಳ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹಾಗೂ ಹಲವು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮಂಗಳವಾರ ಈಡೇರಿತು.

ಪಟ್ಟಣಕ್ಕೆ ಬಂದ ಬೊಮ್ಮಾಯಿ ಅವರನ್ನು ಸ್ವಾಗತಿಸಿದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ₹ 70 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮೂರ್ತಿ ಇರುವ ವೃತ್ತವನ್ನು ಲೋಕಾರ್ಪಣೆ ಮಾಡಿದರು.

ಪಟ್ಟಣದ ಹೃದಯ ಭಾಗವಾದ ಬಜಾರದಲ್ಲಿ ₹74 ಲಕ್ಷ ಅನುದಾನದಲ್ಲಿ ನಿರ್ಮಾಣವಾದ ಅಶ್ವಾರೂಢ ಬಸವೇಶ್ವರರ ಮೂರ್ತಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಬಸವಣ್ಣನವರ ಮೂರ್ತಿ ಅನಾವರಣ ಹಾಗೂ ವೃತ್ತವನ್ನು ಲೋಕಾರ್ಪಣೆ ಮಾಡಿದರು. ಬಸವ ಕೇಂದ್ರದ ಸದಸ್ಯರು, ಮಹಿಳೆಯರು ಉಪಸ್ಥಿತರಿದ್ದರು. ಶರಣು ಗಂಗನಗೌಡರ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.

ಬಸವೇಶ್ವರ ವೃತ್ತದ ಸಮೀಪದಲ್ಲಿ ನಿರ್ಮಾಣವಾದ ನೂತನ ಬಸ್ ನಿಲ್ದಾಣ, ಶರಣ ವೀರೇಶ್ವರರ ಮೂರ್ತಿ ಇರುವ ವೃತ್ತವನ್ನು ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಬಳಿಕ ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.

ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಭರತಗೌಡ ಪಾಟೀಲ ನಡಹಳ್ಳಿ, ಸೋಮನಗೌಡ ಬಿರಾದಾರ, ಗಿರೀಶಗೌಡ ಪಾಟೀಲ,ಸಂಗಣ್ಣ ಹಾವರಗಿ, ಅಮರೇಶ ಹಟ್ಟಿ, ಖಾಜಾಹುಸೇನ ಎತ್ತಿನಮನಿ, ಎ.ಜಿ.ಗಂಗನಗೌಡರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.