ವಿಜಯಪುರ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಮೈತ್ರಿ ಪಕ್ಷ ಬಿಜೆಪಿಗೂ ಮುಜುಗರ ಆಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.

ಸರ್ಕಾರ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದೆ. ತನಿಖೆಯಿಂದ ಸತ್ಯ ಹೊರ ಬರಲಿದೆ, ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲ. ತಪ್ಪು ಮಾಡಿದ ಯಾರಿಗೇ ಆಗಲಿ ಶಿಕ್ಷೆಯಾಗಲೇಬೇಕು ಒತ್ತಾಯಿಸಿದರು.

ರಾಜ್ಯ ಸರ್ಕಾರದ ಆಡಳಿತ ವಿರೋಧಿ ಅಲೆಯ ಕಾರಣದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಲಿದೆ. ರಾಜ್ಯದಲ್ಲಿ ಲೋಕಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ 11 ಹಾಗೂ ಮೈತ್ರಿ ಪಕ್ಷವಾದ ಜೆಡಿಎಸ್ 3 ಸ್ಥಾನಗಳಲ್ಲಿ ಮುಂಚೂಣಿಯಲ್ಲಿದೆ. ಎರಡನೇ ಹಂತದ ಕ್ಷೇತ್ರಗಳಲ್ಲೂ ಬಿಜೆಪಿ ಮುಂದಿದೆ. ಇದನ್ನು ಸಹಿಸಲಾಗದ ಕಾಂಗ್ರೆಸ್, ಅಭ್ಯರ್ಥಿ ಆಧಾರಿತ ಚುನಾವಣೆ ಪ್ರಚಾರ ಮಾಡದೆ ಅಶ್ಲೀಲ ವಿಡಿಯೋ ಪ್ರಕರಣವನ್ನು ರಾಜಕೀಕರಣ ಗೊಳಿಸುತ್ತಿದೆ ಎಂದು ದೂರಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿ ದೂರದ ಕೊಲ್ಕತ್ತಾ ನಗರದಲ್ಲಿ ಪತ್ತೆಯಾಗಿದ್ದಾನೆ. ಈ ಕೃತ್ಯದ ಹಿಂದೆ ಜಿಹಾದಿ ಕೈವಾಡದ ಶಂಕೆಯಿದೆ. ಹುಬ್ಬಳ್ಳಿಯ ನೇಹಾ ಹತ್ಯೆ ಕೃತ್ಯದ ಕೆಲವು ಅಂಶಗಳಿಂದ ಸದರಿ ಘಟನೆ ಹಿಂದೆಯೂ ದೇಶ ವಿರೋಧಿ ಶಕ್ತಿಗಳ ಕೈವಾಡದ ಶಂಕೆ ಇದೆ ಎಂದು ಆರೋಪಿಸಿದರು.

ನಾವು ಅಭಿವೃದ್ಧಿ ಆಧಾರಿತವಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಮೋದಿ ಆಡಳಿತ ಬಂದ ಮೇಲೆ ದೇಶದಲ್ಲಿ ಭಯೋತ್ಪಾದನೆ, ನಕ್ಸಲ್ ಚಟುವಟಿಕೆ ನಿಗ್ರಹವಾಗಿ, ದೇಶದ ಜನರು ಸುರಕ್ಷಿತವಾಗಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿ, ರೈಲ್ವೇ ಯೋಜನೆಗಳು ಅಭಿವೃದ್ಧಿ ಕಂಡಿವೆ. ಇದೆಲ್ಲ ಮೋದಿ ಸರ್ಕಾರ ಮಾಡಿರುವ ಅಭಿವೃದ್ಧಿ. ಇಂಥ ಅಭಿವೃದ್ಧಿ ವ್ಯವಸ್ಥೆಯಲ್ಲಿ ಉದ್ಯೋಗ ಸೃಷ್ಟಿಯಾಗಿರುವುದು ನಿರುದ್ಯೋಗ ನಿವಾರಣೆಗೆ ಸಹಕಾರಿ ಆಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ವಕ್ತಾರ ಸಂಜಯ ಪಾಟೀಲ ಕನಮಡಿ, ಈರಣ್ಣ ರಾವೂರ, ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.