ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ.29ಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಗಿರೀಶ ಬಿರಾದಾರ ಅವರು 2,754 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.

ವಾರ್ಡ್ ನಂ.29ರ ಸದಸ್ಯರಾಗಿದ್ದ ಬಿಜೆಪಿಯ ವಿಜಯಕುಮಾರ ಬಿರಾದಾರ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಕಳೆದ ಶನಿವಾರ ಉಪ ಚುನಾವಣೆ ನಡೆದಿತ್ತು. ವಿಜಯಕುಮಾರ್ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಅನುಕಂಪದ ಅಲೆಯಲ್ಲಿ ಗಿರೀಶ ಬಿರಾದಾರ ಗೆಲುವು ಸಾಧಿಸಿದ್ದಾರೆ.

ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ 1,762 ಮತಗಳನ್ನು ಪಡೆದಿದ್ದಾರೆ. 38 ನೋಟಾ ಮತಗಳು ಚಲಾವಣೆಯಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಒಟ್ಟು 35 ಸದಸ್ಯ ಸ್ಥಾನ ಹೊಂದಿರುವ ಪಾಲಿಕೆಯಲ್ಲಿ ಸದ್ಯ ಬಿಜೆಪಿ 17, ಕಾಂಗ್ರೆಸ್ 10, ಎಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರ 5 ಸ್ಥಾನ ಹೊಂದಿವೆ.

ಎಎಂಐಎಂ, ಜೆಡಿಎಸ್, ಪಕ್ಷೇತರರ ಬೆಂಬಲದೊಂದಿಗೆ ಸದ್ಯ ಕಾಂಗ್ರೆಸ್ ಪಾಲಿಕೆಯಲ್ಲಿ ಅಧಿಕಾರದಲ್ಲಿದೆ. ಮುಂಬರುವ ಜನವರಿಗೆ ಹಾಲಿ ಮೇಯರ್, ಉಪ ಮೇಯರ್ ಅವಧಿ ಮುಗಿಯಲ್ಲಿದ್ದು, ಮುಂದಿನ ಅವಧಿಗೆ ಪಾಲಿಕೆ ಗದ್ದುಗೆ ಹಿಡಿಲು ಬಿಜೆಪಿ, ಕಾಂಗ್ರೆಸ್ ನಡುವೆ ಕಸರತ್ತು ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.