ವಿಜಯಪುರ: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿನ ಹೈದರಾಬಾದ್ ಮೂಲದ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆಯ (ಟಾಟಾ ಇನ್ ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್) ಹವಾಮಾನ ಹಾಗೂ ವಾತಾವರಣ ಅಧ್ಯಯನಕ್ಕಾಗಿ ಉಡಾವಣೆ ಮಾಡಿದ್ದ ಹವಾಮಾನ ಅಧ್ಯಯನ ವೈಜ್ಞಾನಿಕ ಉಪಕರಣ (ಪೆಲೋಡ್ )ವೊಂದು ಪ್ಯಾರಾಚೂಟ್ ನ ನೆರವಿನಿಂದ ಚಡಚಣ ತಾಲ್ಲೂಕಿನ ಧೂಳಖೇಡ ಗ್ರಾಮದ ಜಮೀನಿನಲ್ಲಿ ಬಂದಿಳಿದಿದೆ.

ಜಿಲ್ಲಾಡಳಿತವು ಸಂಬಂಧಿತ ಸಂಸ್ಥೆಯನ್ನು ಸಂಪರ್ಕಿಸಿ ಈಗಾಗಲೇ ಮಾಹಿತಿ ಒದಗಿಸಿದೆ.

ಸಂಸ್ಥೆಯ ಅಧಿಕಾರಿಗಳ ತಂಡ ಸದ್ಯದಲ್ಲಿಯೇ ವಿಜಯಪುರಕ್ಕೆ ಆಗಮಿಸಲಿದೆ. ಅಲ್ಲದೆ, ಜಮೀನಿನಲ್ಲಿ ಬಿದ್ದಿರುವ ಪ್ಯಾರಾಚ್ಯೂಟ್ ಹಾಗೂ ಪೆಲೋಡ್, ಅದಕ್ಕೆ ಸಬಂಧಿಸಿದ ಸಾಧನಾ ಸಲಕರಣೆಗಳನ್ನು ತೆಗೆದುಕೊಂಡು ಹೋಗಲಿದೆ. ಆದಕಾರಣ, ಈ ಬಗ್ಗೆ ಯಾರೂ ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಈ ಉಪಕರಣವು ಹೊಲವೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ವಿಷಯ ತಿಳಿಯುತ್ತಿದಂತೆ ಸುತ್ತಲಿನ ನೂರಾರು ಜನರು ಕುತೂಹಲದಿಂದ ಗುಂಪುಗೂಡಿ ವೀಕ್ಷಿಸಿದರು.

ಉಪಕರಣಕ್ಕೆ ಯಾವುದೇ ಹಾನಿಯಾಗದಂತೆ ಚಡಚಣ ತಹಶೀಲ್ದಾರ್ ಹಾಗೂ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.