ಮಂಗಳವಾರ, 2 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಮಾರಕಗಳು ದೇಶದ ಅಮೂಲ್ಯ ಸ್ವತ್ತು: ಬಿರಾದಾರ

Published 30 ಜೂನ್ 2024, 14:41 IST
Last Updated 30 ಜೂನ್ 2024, 14:41 IST
ಅಕ್ಷರ ಗಾತ್ರ

ವಿಜಯಪುರ: ಐತಿಹಾಸಿಕ ಸ್ಮಾರಕಗಳು ದೇಶದ ಅಮೂಲ್ಯ ಸ್ವತ್ತಾಗಿದ್ದು, ಅವುಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಡಾ.ಎನ್.ಪಿ. ಬಿರಾದಾರ ಹೇಳಿದರು.

ವಿದ್ಯಾವರ್ಧಕ ಸಂಘದ ಬನ್ಸಿಲಾಲ್ ವಿಠ್ಠಲ್ ದಾಸ್ ದರ್ಬಾರ್ ಪದವಿ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ‘ಐತಿಹಾಸಿಕ ಸ್ಮಾರಕಗಳ ರಕ್ಷಣೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾಚೀನ ಕಾಲದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ನಿರ್ಮಿಸಿದ ಹಲವು ಸ್ಮಾರಕಗಳು, ಗುಡಿ-ಕೆರೆ-ಕಟ್ಟೆಗಳು, ಮಸೀದಿಗಳು ನಮ್ಮ ದೇಶದ ಪರಂಪರೆ ಮತ್ತು ಸಂಸ್ಕೃತಿಯ ಪ್ರತೀಕವಾಗಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾಗಿದ್ದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.

ಪ್ರೊ.ರಾಜು ಕಪಾಲಿ ಮಾತನಾಡಿ, ಗುಮ್ಮಟ ನಗರಿ ಎಂದು ಪ್ರಸಿದ್ಧವಾದ ವಿಜಯಪುರದಲ್ಲಿ ಸುಮಾರು ಐತಿಹಾಸಿಕ ಸ್ಥಳಗಳಿದ್ದು ಅವುಗಳೆಲ್ಲವನ್ನು ಸಂರಕ್ಷಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

ಎನ್ಎಸ್ಎಸ್ ಸಹಾಯಕ ಅಧಿಕಾರಿ ಸುನಿತಾ ಅವರಸಂಗ ಹಾಗೂ ಸಂತೋಷ, ವಿದ್ಯಾರ್ಥಿಗಳು ಉಪನ್ಯಾಸಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT