ವಿಜಯಪುರ: ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಆರೋಪ ಸಾಬೀತಾಗಿದ್ದು, ಅಪರಾಧಿಗೆ ₹20 ಸಾವಿರ ದಂಡ ಮತ್ತು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್ ಮಂಗಳವಾರ ಆದೇಶಿಸಿದೆ.

ವಿಜಯಪುರ ತಾಲ್ಲೂಕಿನ ಇಂಗನಾಳ ಗ್ರಾಮದ ಪರಸಪ್ಪ ವಾಲಿಕಾರ 2021ರ ಡಿಸೆಂಬರ್ 11ರಂದು 23.58 ಲೀಟರ್ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಇಟ್ಟುಕೊಂಡಿರುವಾಗ ಅಬಕಾರಿ ಸಿಬ್ಬಂದಿ ದಾಳಿ ಮಾಡಿ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದರು.

ವಿಜಯಪುರ ಮೂರನೇ ಜೆಎಂಎಫ್ಸಿ ನ್ಯಾಯಾಧೀಶೆ ಸ್ಮೀತಾ ಮಾಲಗಾಂವಿ ಪ್ರಕರಣದ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ವಿಶ್ವನಾಥ ಪಾಟೀಲ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.