ವಿಜಯಪುರ: ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಈ ಕುರಿತು ‘ಪ್ರಜಾವಾಣಿ’ ಪ್ರತಿಕ್ರಿಯಿಸಿದ ಅವರು, ‘ಕೌಶಲ ಅಭಿವೃದ್ಧಿ ನಿಗಮಕ್ಕೆ ನನ್ನನ್ನು ನೇಮಕ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲಾ, ಜಿಲ್ಲೆಯ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರಿಗೆ ಹಾಗೂ ಪ್ರತಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದರು.

‘ರಾಜಕೀಯವಾಗಿ ನನಗೆ ಅತ್ಯಂತ ಮಹತ್ವದ ಜವಾಬ್ದಾರಿ ಇದಾಗಿದೆ. ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಸ್ಥಾನಮಾನವನ್ನು ಕಾಂಗ್ರೆಸ್ ನೀಡುತ್ತದೆ ಎಂಬುದಕ್ಕೆ ನಾನು ಸಾಕ್ಷಿಯಾಗಿದ್ದೇನೆ’ ಎಂದು ಹೇಳಿದರು.

‘ನಿಗಮದ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು, ನಿಗಮದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುತ್ತೇನೆ. ರಾಜ್ಯದಲ್ಲೇ ಮಾದರಿ ನಿಗಮವನ್ನಾಗಿ ಮಾಡಲು ಯತ್ನಿಸುತ್ತೇನೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರಬಲವಾಗಿರುವ ಬಂಜಾರ ಸಮುದಾಯಕ್ಕೆ ಸೇರಿರುವ ಕಾಂತಾ ನಾಯಕ ಅವರು ಹೋದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಅವರ ಕೈತಪ್ಪಿತ್ತು. ಇದೀಗ ಅವರು ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಚುನಾವಣೆಗೆ ಅಗತ್ಯ ಸಿದ್ಧತೆಯಲ್ಲೂ ತೊಡಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.