ವಿಜಯಪುರ: ‘ರಾಜ್ಯದ ಮುಖ್ಯಮಂತ್ರಿ ಕುರ್ಚಿಯಲ್ಲಿ ಟಗರು ಕುಂತದೆ. ಆ ಟಗರನ್ನು ಇಳಿಸುವುದು ಅಷ್ಟು ಸುಲಭನಾ? ಟಗರನ್ನು ಅಲ್ಲಾಡಿಸಲು ಸಾಧ್ಯನಾ’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು.

‘ರಾಜ್ಯದಲ್ಲಿ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಖರ್ಗೆ ಅವರೇ ಹೇಳಿದ್ದಾರೆ. ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದರೆ ತಾನೇ ಮುಂದಿನ ಮಾತು’ ಎಂದು ದಲಿತ ಸಿಎಂ ವಿಚಾರವಾಗಿ ನಗರದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಸಿಎಂ ಅಧಿಕಾರ ತಲಾ ಎರಡೂವರೆ ವರ್ಷ ಹಂಚಿಕೆ ಎಂಬುದು ಮಾಧ್ಯಮದವರ ಸೃಷ್ಟಿ. ಈ ವಿಚಾರ ಕುರಿತು ಡಿ.ಕೆ.ಸುರೇಶ್ ಅವರು ಕೂಡ 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.