ವಿಜಯಪುರ: ಜಿಲ್ಲೆಯಾದ್ಯಂತ ಶುಕ್ರವಾರ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು, ಸಂಭ್ರಮ, ಸಡಗರರಿಂದ ಅದ್ಧೂರಿಯಾಗಿ ಆಚರಿಸಲಾಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಶುಭಾಶಯ ಕೋರಿದರು.

ಭಾರತಕ್ಕೆ ಬಲವಾಗಿ ಚಿರಕಾಲ ಬೆಳಗಲಿ ಕನ್ನಡದ ದೀಪ, ಉಳಿಸೋಣ, ಬೆಳೆಸೋಣ ಕನ್ನಡ ಎಂದು ಹೇಳಿದರು.

ಪೊಲೀಸ್, ಸ್ಕೌಟ್ ಮತ್ತು ಗೈಡ್ಸ್, ಎನ್ ಸಿಸಿ, ಎನ್ ಎಸ್ ಎಸ್, ಗೃಹ ರಕ್ಷಕ ದಳ, ಸೇವಾ ದಳ ಸೇರಿದಂತೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ವಿದ್ಯಾರ್ಥಿಗಳು ನಾಡಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ಕ್ರೀಡಾಂಗಣದ ವರೆಗೆ ವಿವಿಧ ಜನಪದ ಕಲಾತಂಡಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆಗೆ ನಡೆಯಿತು.

ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರದ 25 ಸಾಧಕರಿಗೆ ಸನ್ಮಾನಿಸಲಾಯಿತು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮೇಯರ್ ಮೆಹಜಬಿನ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.