ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಪ್ರಧಾನಿ ಮೋದಿ, ಸಿ.ಎಂ ಬೊಮ್ಮಾಯಿ ಸೇರಿದಂತೆ ರಾಜ್ಯದಾದ್ಯಂತ ಭಕ್ತ ಸಮೂಹ ಕಂಬನಿ ಮಿಡಿದಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸಿದ್ಧೇಶ್ವರ ಸ್ವಾಮೀಜಿ ಅವರು 2014ರಲ್ಲಿ ವಿಲ್ ಬರೆದಿಟ್ಟಿದ್ದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಲ್ ಪತ್ರದಲ್ಲಿ ಏನಿದೆ?

1. ಬದುಕು ಅನುಭವಗಳ ಪ್ರವಾಹ.

2. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ. ಅದರ ಸೌಂದರ್ಯವು ರಾಗ, ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ.

3. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದೇ ಸಾಧನೆ.

4. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೇ ಧರ್ಮ. ಅದು ಸ್ವ - ಪರ ನೆಮ್ಮದಿಗೆ ಕಾರಣ.

5. ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು.

6. ಅದನ್ನು ರೂಪಿಸಿದವರು ಗುರುದೇವರು. ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹ- ಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು.

7. ನಿಸರ್ಗವು ಮೈಮನಸ್ಸುಗಳಿಗೆ ತಂಪನ್ನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿ ಬೆಳಗ ಹರಡಿವೆ. ಜಾಗತಿಕ ತತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಠಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ.

8. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ.

9. ಬದುಕು ಮುಗಿಯುತ್ತಿದೆ; ದೀಪ ಆರಿದಂತೆ; ತೆರೆ ಅಡಗಿದಂತೆ; ಮೇಘ ಕರಗಿದಂತೆ.

10. ಉಳಿಯುವುದು ಬರೀ ಬಯಲು. ಮಹಾಮೌನ, ಶೂನ್ಯ ಸತ್ಯ!

11. ಹಲವು ದಶಕಗಳ ಕಾಲ ಈ ಅದ್ಬುತ ಜಗತ್ತಿನಲ್ಲಿ ಬಾಳಿದ್ದೇನೆ; ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆ ಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಾದನ- ಪತ್ರ.

ದೇಹದ ವಿಷಯದಲ್ಲಿ ಒಂದೆರೆಡು ಆಶಯಗಳು

1. ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿ ಸ್ಪರ್ಶ  ಮಾಡುವುದು

2. ಶ್ರಾದ್ಧಿಕ ವಿಧಿ- ವಿಧಾನಗಳು ಅನಗತ್ಯ.

3. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು.

4. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು

ಅಂತಿಮ ನೆನಹು
1. "ಸತ್ಯವೂ ಇಲ್ಲ, ಅಸತ್ಯವೂ ಇಲ್ಲ.
ಸಹಜವೂ ಇಲ್ಲ, ಅಸಹಜವೂ ಇಲ್ಲ.
ನಾನೂ ಇಲ್ಲ, ನೀನೂ ಇಲ್ಲ.
ಇಲ್ಲ, ಇಲ್ಲ ಎಂಬುದು ತಾನಿಲ್ಲ.
ಗುಹೇಶ್ವರನೆಂಬುದು ತಾ ಬಯಲು"

2. ಅಂತ್ಯ ಪ್ರಣಮಾಂಜಲಿಃ!

(ಸ್ವಾಮಿ ಸಿದ್ದೇಶ್ವರ)

ಗುರುಪೂರ್ಣಿಮೆ 2014

ಇವನ್ನೂ ಓದಿ...

‘ಜ್ಞಾನಯೋಗಿ’ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯ

ನುಡಿದಂತೆ ನಡೆದ ಸಜ್ಜನಿಕೆಯ ಸಿದ್ಧೇಶ್ವರ ಸ್ವಾಮೀಜಿ...

‘ಕಿಸೆ’ಯಿಲ್ಲದ ವೈರಾಗ್ಯಮೂರ್ತಿ ಸಿದ್ಧೇಶ್ವರ ಸ್ವಾಮೀಜಿ

ಸಿದ್ಧೇಶ್ವರ ಸ್ವಾಮೀಜಿ ನಿಧನ: ಪ್ರಧಾನಿ ಮೋದಿ, ದೇವೇಗೌಡ ಸೇರಿ ಗಣ್ಯರಿಂದ ಸಂತಾಪ

ಸಿದ್ಧೇಶ್ವರ ಸ್ವಾಮೀಜಿ ನಿಧನ: ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ರಾಜ್ಯ ನಾಯಕರ ಕಂಬನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.