ವಿಜಯಪುರ: ‘ಸಿಎಂ ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್’ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ.ಪಾಟೀಲ, ‘ಶಾಸಕ ಯತ್ನಾಳ ಮೂರನೇ ಟಿಪ್ಪು ಸುಲ್ತಾನ್’ ಎಂದು ತಿರುಗೇಟು ನೀಡಿದರು.

ಇಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ‘ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ ಅವರನ್ನು ಸನ್ಮಾನಿಸಿದ ಚಿತ್ರಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಶಾಸಕ ಯತ್ನಾಳ ಮೂರನೇ ಟಿಪ್ಪು ಸುಲ್ತಾನ್’ ಎಂದರು.

‘ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ್ದು ಸತ್ಯ. ಆ ಇತಿಹಾಸವನ್ನು ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಆದರೆ, ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಸಂಘಟನೆಯವರ ಪಾತ್ರವಿಲ್ಲ. ಅವರೆಲ್ಲರೂ ಬ್ರಿಟಿಷರ ಪರ ಇದ್ದರು’ ಎಂದರು.

‘ಶಾಲೆ- ಕಾಲೇಜುಗಳಲ್ಲಿ ಜಾತಿ, ಧರ್ಮದ ವಿಷಯ ಬರಬಾರದು. ಹಿಜಾಬ್ ಗದ್ದಲ ಬರುವ ಮುಂಚೆ ಶಾಲೆ-ಕಾಲೇಜು ಹೇಗಿದ್ದವೋ ಹಾಗೆಯೇ ಇರಲಿ’ ಎಂದರು.

ಎಂ.ಬಿ.ಪಾಟೀಲ ಅವರು ನಾಲ್ಕನೇ ಟಿಪ್ಪು ಸುಲ್ತಾನ್. ಶಾಲೆ-ಕಾಲೇಜಿನಲ್ಲಿ ವಸ್ತ್ರಸಂಹಿತೆ ಕಾಪಾಡಬೇಕು ಎಂಬ ಆದೇಶವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತುಷ್ಟೀಕರಣ ಮಾಡಲೆತ್ನಿಸಿ ಸಿಕ್ಕಿಬಿದ್ದರು.
–ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.