ವಿಜಯಪುರ: ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ನಾಲ್ವರು ಸಹೋದರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಾವಳಸಂಗದಲ್ಲಿ ಗುರುವಾರ ಸಂಜೆ ಜರುಗಲಿದೆ.

ಇಂಡಿ ತಾಲ್ಲೂಕಿನ ಸಾವಳಸಂಗ ಗ್ರಾಮದ ರೈತ ಕುಟುಂಬದವರಾದ ಎನ್.ಎಸ್.ಖೇಡ್ ಅವರು 1980ರಲ್ಲಿ ಜನತಾ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಿ, ಕಡಿಮೆ ಮತಗಳಿಂದ ಪರಾಭವಗೊಂಡಿದ್ದರು.

ಮಾಜಿ ಪ್ರಧಾನಿಗಳಾದ ಚಂದ್ರಶೇಖರ, ಎಚ್.ಡಿ.ದೇವೆಗೌಡ ಅವರ ದೀರ್ಘ ಕಾಲದ ಒಡನಾಡಿಯಾಗಿದ್ದ ಎನ್.ಎಸ್.ಖೇಡ ಅವರು, 1985-89 ರವರೆಗೆ ಇಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯರಾಗಿ, ವಿಜಯಪುರದ ಹಿಟ್ನಳ್ಳಿಯಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಕಾರಣರಾಗಿದ್ದರು. ಬಿ.ಎಲ್.ಡಿ.ಇ ಸಂಸ್ಥೆಯ ಆಜೀವ ಸದಸ್ಯರಾಗಿ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ, ವೈದ್ಯಕೀಯ ಕಾಲೇಜು ಸ್ಥಾಪನೆಯಲ್ಲಿ ಶ್ರಮವಹಿಸಿದ್ದರು.

ಕೃಷಿ, ರೈತರು, ನೀರಾವರಿ ಕುರಿತು ಅಪಾರ ಆಸಕ್ತಿ ಹೊಂದಿದ್ದ ಇವರು ಡಾ.ರಾಜೇಂದ್ರ ಸಿಂಗ್ ಅವರೊಂದಿಗೆ ಅವರ ಸ್ವಯಂಸೇವಾ ಸಂಘದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಸಂತಾಪ: ಎನ್.ಎಸ್.ಖೇಡ್ ಅವರ ನಿಧನಕ್ಕೆ ಮಾಜಿ ಪ್ರಧಾನ ಎಚ್.ಡಿ.ದೇವೆಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಎಂ.ಬಿ.ಪಾಟೀಲ್, ಹಿಂದುಳಿದ ಆಯೋಗಗಳ ಅಧ್ಯಕ್ಷ ಕೆ.ಜಯಪ್ರಕಾಶ ಹೆಗಡೆ, ವಿಧಾನಪರಿಷತ್ ಸದಸ್ಯರಾದ ಕೊಂಡಜ್ಜಿ ಮೋಹನ, ಸುನೀಲಗೌಡ ಪಾಟೀಲ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.