ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಭಾರಿ ಸದ್ದು ಮಾಡತೊಡಗಿದೆ.

'ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ' ಎಂಬ ಬರಹ ಹಾಗೂ ಶಾಸಕ ಯತ್ನಾಳ ಅವರ ಭಾವಚಿತ್ರ ಇರುವ ಪೋಸ್ಟ್ ಹರಿದಾಡತೊಡಗಿದೆ.

ಈ ಸಂಬಂಧ ಯತ್ನಾಳ ಅವರ ಆಪ್ತ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಜಾಧವ್ ಅವರು ವಿಜಯಪುರದ ಸೈಬರ್ ( ಸಿಇಎನ್) ಕ್ರೈಂ ಪೊಲೀಸ್ ಠಾಣೆಗೆ ಬುಧವಾರ ಸಂಜೆ ದೂರು ನೀಡಿದ್ದಾರೆ.

'ನಮ್ಮ ಕಾಂಗ್ರೆಸ್' ಇನ್ಸ್ಟಾಗ್ರಾಮ್ ಖಾತೆಯ ಪ್ರೊಪೈಲ್ನಲ್ಲಿ ಶಾಸಕ ಯತ್ನಾಳ ಅವರ ಭಾವಚಿತ್ರ ಹಾಗೂ ಅಶ್ಲೀಲ ಬರಹ ಹರಿದಾಡುತ್ತಿದೆ. ಈ ಮೂಲಕ ಶಾಸಕರಿಗೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮತೀಯ ಗೂಂಡಾಗಿರಿ: ಬೊಮ್ಮಾಯಿ ಹೇಳಿಕೆಗೆ ತೀವ್ರ ಆಕ್ರೋಶ, ಬೊಮ್ಮಾಯಿ ಸಮರ್ಥನೆ

ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.